ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಣಿಕೊಪ್ಪಲು: ದನಗಾಹಿ ಕೊಂದಿದ್ದ ಹುಲಿ ಸೆರೆ

Published 20 ಏಪ್ರಿಲ್ 2024, 3:14 IST
Last Updated 20 ಏಪ್ರಿಲ್ 2024, 3:14 IST
ಅಕ್ಷರ ಗಾತ್ರ

ಗೋಣಿಕೊಪ್ಪಲು (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ನಿಟ್ಟೂರು ಜಾಗಲೆಯಲ್ಲಿ ಶುಕ್ರವಾರ ಅರಣ್ಯ ಇಲಾಖೆ ಸಿಬ್ಬಂದಿ 11 ವರ್ಷ ವಯಸ್ಸಿನ ಹೆಣ್ಣು ಹುಲಿಯನ್ನು ಸೆರೆ ಹಿಡಿದಿದ್ದಾರೆ. ಇಲ್ಲಿ ಗುರುವಾರವಷ್ಟೇ ಹುಲಿ ದಾಳಿಯಿಂದ ದನಗಾಹಿಯೊಬ್ಬರು ಮೃತಪಟ್ಟಿದ್ದರು. ಅವರ ಶವ ದೊರೆತ ಸ್ಥಳದಿಂದ 200 ಮೀಟರ್ ದೂರದಲ್ಲಿ ಕಾಫಿತೋಟದ ನೆರಳಿನಲ್ಲಿ ಹುಲಿಯು ವಿರಮಿಸಿತ್ತು.

ಕಾರ್ಯಾಚರಣೆ ಕೈಗೊಂಡ ಸುಮಾರು 100ಕ್ಕೂ ಅಧಿಕ ಸಿಬ್ಬಂದಿ, ಹುಲಿಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದರು.

‘ಹುಲಿಯು ಏನನ್ನೂ ಸೇವಿಸದೇ ಬಳಲಿದಂತೆ ಕಂಡು ಬಂದಿದೆ. ಕಾರಣ ತಿಳಿಯುತ್ತಿಲ್ಲ. ಮೈಸೂರಿನ ಕೂರ್ಗಳ್ಳಿಯಲ್ಲಿರುವ ಚಾಮುಂಡಿ ವನ್ಯಜೀವಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಮೂಲಗಳು ತಿಳಿಸಿವೆ.

ಮಡಿಕೇರಿ ಸಿಸಿಫ್ ಮನೋಜ್ ಕುಮಾರ್ ತ್ರಿಪಾಠಿ, ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದ ನಿರ್ದೇಶಕ ಹರ್ಷಕುಮಾರ್, ಡಿಸಿಎಫ್, ಜಗನ್ನಾಥ್, ತಿತಿಮತಿ ಎಸಿಎಫ್ ಗೋಪಾಲ್, ವಿರಾಜಪೇಟೆ ಎಸಿಎಫ್ ನೆಹರು, ಅನುಷಾ, ಆರ್‌ಫ್‌ಒ ಗಂಗಾಧರ ಕಾರ್ಯಾಚರಣೆ ತಂಡದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT