ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಜಪೇಟೆ: ಹುಲಿ ಮೃತದೇಹ ಪತ್ತೆ

Last Updated 28 ಜೂನ್ 2022, 14:42 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪದ ನಾಂಗಾ‌ಲ ಗ್ರಾಮದಲ್ಲಿ ಮಂಗಳವಾರ ಹುಲಿಯೊಂದರ ಮೃತದೇಹ ಪತ್ತೆಯಾಗಿದ್ದು, ದೇಹದ ಮೇಲೆ ಗುಂಡೇಟಿನ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆಯಷ್ಟೆ ಕಾರ್ಮಿಕರೊಬ್ಬರು ಹುಲಿ ದಾಳಿಗೆ ಮೃತಪಟ್ಟಿದ್ದರು. ಬಳಿಕ ಹುಲಿಯನ್ನು ಗುಂಡಿಕ್ಕಿ ಕೊಲ್ಲಬೇಕೆಂದು‌ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.

ಅರಣ್ಯ ಇಲಾಖೆ ಕೂಂಬಿಂಗ್ ನಡೆಸಿದ್ದರೂ ಹುಲಿ ಪತ್ತೆ ಆಗಿರಲಿಲ್ಲ. ಆದರೆ, ಜಾನುವಾರುಗಳ ಮೇಲೆ ದಾಳಿ ನಡೆಸಿ ಅವುಗಳನ್ನು ಹುಲಿ ಕೊಲ್ಲುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT