ಪೊನ್ನಂಪೇಟೆ: ಬಾವಿಯಲ್ಲಿ ಹುಲಿ ಕಳೇಬರ ಪತ್ತೆ

ಪೊನ್ನಂಪೇಟೆ: ಶ್ರೀಮಂಗಲ ಗ್ರಾಮದ ಕೂರ್ಗ್ ಗೆಸ್ಟ್ ಹೌಸ್ ಸಮೀಪ ಪಾಳು ಬಾವಿಯಲ್ಲಿ ಹುಲಿ ಕಳೇಬರ ಪತ್ತೆಯಾಗಿದೆ.
ಮುಖ್ಯರಸ್ತೆ ಬದಿಯಲ್ಲಿರುವ ಗಣೇಶ್ ಎಂಬುವವರಿಗೆ ಸೇರಿದ ಸುಮಾರು 15 ಅಡಿ ಆಳವಿರುವ ಬಾವಿಗೆ ಹುಲಿ ಬಿದ್ದು ಏಳು ದಿನಗಳು ಕಳೆದಿರಬಹುದು ಎಂದು ಅಂದಾಜಿಸಲಾಗಿದೆ. ಕಳೇಬರ ಕೊಳೆತ ಸ್ಥಿತಿಯಲ್ಲಿದೆ.
ಹುಲಿ ಕಳೇಬರ ವಾಸನೆ ಬರುತ್ತಿದ್ದರಿಂದ ಸಾರ್ವಜನಿಕರಿಗೆ ಪತ್ತೆಯಾಗಿದೆ.
ತಿತಿಮತಿ ಎಸಿಎಫ್ ಉತ್ತಪ್ಪ, ಪೊನ್ನಂಪೇಟೆ ವಲಯ ಅರಣ್ಯಾಧಿಕಾರಿ ರಾಜಪ್ಪ, ಶ್ರೀಮಂಗಲ ವನ್ಯಜೀವಿ ವಲಯ ಅರಣ್ಯಾಧಿಕಾರಿ ವೀರೇಂದ್ರ ಮರಿ ಬಸಣ್ಣವರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.