ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೋಣಿಕೊಪ್ಪಲು: ಇಬ್ಬರನ್ನು ಕೊಂದಿದ್ದ ಹೆಣ್ಣು ಹುಲಿ ಸೆರೆ

ಹುಲಿ ಪತ್ತೆ ಕಾರ್ಯಾಚರಣೆ ತಂಡದಲ್ಲಿ 6 ಮಂದಿ ಪಶುವೈದ್ಯರು ಇದ್ದರು.
Last Updated 14 ಫೆಬ್ರುವರಿ 2023, 11:20 IST
ಅಕ್ಷರ ಗಾತ್ರ

ಗೋಣಿಕೊಪ್ಪಲು (ಕೊಡಗು): ಇಲ್ಲಿಗೆ ಸಮೀಪದ ಕೆ.ಬಾಡಗ ಗ್ರಾಮದ ಚೂರಿಕಾಡುವಿನಲ್ಲಿ ಇಬ್ಬರನ್ನು ಕೊಂದು ಆತಂಕ ಸೃಷ್ಟಿಸಿದ್ದ ಹುಲಿಯನ್ನು ಮಂಗಳವಾರ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಸಮೀಪದ ನಾಣಚ್ಚಿ ಬಳಿಯ ಕಾಫಿ ತೋಟದಲ್ಲಿ ಅಡಗಿದ್ದ ಹುಲಿಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಯಿತು.

ಇದರ ಅಂದಾಜು ವಯಸ್ಸು 12. ವಯಸ್ಸಾಗಿರುವ ಕಾರಣಕ್ಕೆ ಇದು ಕಾಡಿನಿಂದ ಹೊರಬಂದು ಜನ ಜಾನುವಾರುಗಳ ಮೇಲೆ ಆಕ್ರಮಣ ಮಾಡುತ್ತಿತ್ತು ಎಂದು ವಲಯ ಅರಣ್ಯಾಧಿಕಾರಿ ಅಶೋಕ್ ಹುನಗುಂದ ತಿಳಿಸಿದರು.

ಹುಲಿ ಪತ್ತೆ ಕಾರ್ಯಾಚರಣೆ ತಂಡದಲ್ಲಿ 6 ಮಂದಿ ಪಶುವೈದ್ಯರು ಇದ್ದರು.

ಹುಲಿ ಉಪವಲಯ ಅರಣ್ಯಾಧಿಕಾರಿ ರಂಜನ್ ಅವರ ಕಣ್ಣಿಗೆ ಕಾಣಿಸಿಕೊಂಡಿದೆ. ಆಗ ತಕ್ಷಣವೇ ಅವರು ಅರಿವಳಿಕೆ ಚುಚ್ಚುಮದ್ದು ಪ್ರಯೋಗಿಸಿದರು. ಸ್ವಲ್ಪ ದೂರು ಸಾಗಿದ ಹುಲಿ ಪ್ರಜ್ಞೆ ತಪ್ಪಿ ಬಿದ್ದಿತು. ಸೆರೆ ಹಿಡಿದ ಹುಲಿಯನ್ನು ಮೈಸೂರಿನ ಕೂರ್ಗಳ್ಳಿಯ ವನ್ಯಜೀವಿ ಪುನರ್ವಸತಿ ಕೇಂದ್ರಕ್ಕೆ ಸಾಗಿಸಲಾಯಿತು ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT