ಸೋಮವಾರ, ಮಾರ್ಚ್ 30, 2020
19 °C

ಕೊಡಗು: ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿರುವ ನಿಷೇಧಾಜ್ಞೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಅಲ್ಪಮಟ್ಟಿನ ಸಡಿಲಿಕೆ ಮಾಡಲಾಗಿದೆ.

ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಲು, ದಿನಪತ್ರಿಕೆ, ತರಕಾರಿ, ದಿನಸಿ ಸಾಮಗ್ರಿ ಖರೀದಿಸಲು ಸಾರ್ವಜನಿಕರಿಗೆ ಮತ್ತು ಮಾರಾಟ ಮಳಿಗೆ ತೆರೆಯಲು ವಿತರಕರಿಗೆ ಅವಕಾಶವಿರುತ್ತದೆ.

ಅಗತ್ಯ ವಸ್ತುಗಳನ್ನು ಖರೀದಿಸಲು ಸಮಯವನ್ನು ವಿಸ್ತರಿಸಲಾಗಿದ್ದು, ಸಾರ್ವಜನಿಕರು ಅವಸರ ಪಡದೆ, ಗುಂಪುಗೂಡದೆ, ಕನಿಷ್ಠ 1 ಮೀಟರ್ ಸಾಮಾಜಿಕ ಅಂತರ ಕಾಯ್ದುಕೊಂಡು ನಿರ್ಭೀತಿಯಿಂದ ಖರೀದಿಸಬಹುದಾಗಿದೆ ಎಂದು‌ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಇದಕ್ಕೂ ಮೊದಲು‌ ಬೆಳಿಗ್ಗೆ 6ರಿಂದ 8ರ ತನಕ ಹಾಲು, ದಿನಪತ್ರಿಕೆ ಖರೀದಿ ಹಾಗೂ ಮಧ್ಯಾಹ್ನ 12ರಿಂದ 2ರ ತನಕ ದಿನಸಿ ಹಾಗೂ ತರಕಾರಿ ಖರೀದಿಗೆ ಅವಕಾಶ ನೀಡಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು