ಸೋಮವಾರಪೇಟೆ: ಪಟ್ಟಣದ ಸಿ.ಕೆ. ಸುಬ್ಬಯ್ಯ ರಸ್ತೆಯಲ್ಲಿ ನಿರ್ಮಿಸಲು ಮುಂದಾಗಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಸ್ಥಗಿತಗೊಂಡಿದ್ದು, ಕೂಡಲೇ ಪ್ರಾರಂಭಿಸಬೇಕು ಎಂದು ಇಂದಿರಾ ಗಾಂಧಿ ಅಭಿಮಾನಿಗಳ ಸಂಘ ಶಾಸಕರಲ್ಲಿ ಬುಧವಾರ ಮನವಿ ಮಾಡಿತು.
2013ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ಧರಾಮಯ್ಯ ಅವರ ಕನಸ್ಸಿನ ಕೂಸಾದ ಇಂದಿರಾಗಾಂಧಿ ಕ್ಯಾಂಟೀನ್ ನಿರ್ಮಾಣಕ್ಕೆ, ಹಲವು ತಿಂಗಳುಗಳ ಹಿಂದೆ ಚಾಲನೆ ನೀಡಲಾಗಿತ್ತು. ನೆಲಮಟ್ಟದ ವರೆಗೆ ಕಾಮಗಾರಿ ಮಾಡಿ, ನಂತರ ಸರ್ಕಾರ ಬದಲಾದ ನಂತರ, ಬಂದ ಶಾಸಕರು ಕಾಮಗಾರಿ ಮುಂದುವರಿಸಲು ಆಸಕ್ತಿ ತೋರದ ಹಿನ್ನೆಲೆಯಲ್ಲಿ ಕ್ಯಾಂಟೀನ್ ಪ್ರಾರಂಭವಾಗಿಲ್ಲ.
ಕ್ಯಾಂಟೀನ್ ಕಟ್ಟಡದ ಕಾಮಗಾರಿ ಕೂಡಲೇ ಪ್ರಾರಂಭಿಸಿ, ಬಡವರಿಗೆ ಹಾಗೂ ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಅನುಕೂಲ ಮಾಡಿಕೊಡಬೇಕೆಂದು ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ. ನಾಗರಾಜು ಮನವಿಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.