ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಹೆಬ್ಬಾಲೆ ಬನಶಂಕರಿ ಉತ್ಸವ

Published 11 ಡಿಸೆಂಬರ್ 2023, 22:48 IST
Last Updated 11 ಡಿಸೆಂಬರ್ 2023, 22:48 IST
ಅಕ್ಷರ ಗಾತ್ರ

ಕುಶಾಲನಗರ: ತಾಲ್ಲೂಕಿನ ಹೆಬ್ಬಾಲೆಯಲ್ಲಿ ಇಂದು(ಡಿ.12 ) ಗ್ರಾಮ ದೇವತೆ ಬನಶಂಕರಿ ದೇವಿ ವಾರ್ಷಿಕ ಉತ್ಸವ ನಡೆಯಲಿದೆ.

ಗ್ರಾಮದ ಬಸವೇಶ್ವರ ಹಾಗೂ ಬನಶಂಕರಿ ದೇವಾಲಯ ಸಮಿತಿಯಿಂದ ಉತ್ಸವಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಗ್ರಾಮದ ನವವಧುವಿನಂತೆ ಶೃಂಗಾರಗೊಂಡಿದೆ.

ರಾತ್ರಿ 10ರಿಂದ ಬೆಳಗಿನ ಜಾವ 4 ಗಂಟೆವರೆಗೆ ನಡೆಯುವ ದೇವಿಯ ಆರಾಧನೆ ಹಾಗೂ ಉತ್ಸವ ಮಂಟಪಗಳ ಶೋಭಾಯಾತ್ರೆ ಹಬ್ಬಕ್ಕೆ‌ ವಿಶೇಷ ಮೆರಗು ನೀಡಲಿದೆ.

ಈ ಹಬ್ಬಕ್ಕೆ ಮೈಸೂರು, ಹಾಸನ‌ ಜಿಲ್ಲೆ ಗಡಿ ಗ್ರಾಮಗಳ ಭಕ್ತರು, ಅಕ್ಕಪಕ್ಕದ ಊರುಗಳ ಸಾವಿರಾರು ಜನರು ಈ ಉತ್ಸವದಲ್ಲಿ ಪಾಲ್ಗೊಳ್ಳುವರು. ಜನ ಸಾಗರದ ನಡುವೆ ನಡೆಯುವ‌ ಉತ್ಸವಕ್ಕೆ ಪೊಲೀಸ್ ಇಲಾಖೆಯಿಂದ ಭದ್ರತಾ ವ್ಯವಸ್ಥೆ ಕೈಗೊಳ್ಳಲಿದ್ದಾರೆ.

ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ಕೈಗೊಳ್ಳುವ ಬಗ್ಗೆ ಪೊಲೀಸ್ ಇಲಾಖೆ‌ ಭರವಸೆ ನೀಡಿದ್ದಾರೆ. ಡಿವೈಎಸ್ಪಿ ಗಂಗಾಧರ್ ನೇತೃತ್ವದಲ್ಲಿ ಸಿಪಿಐ ಹಾಗೂ ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲಾ ಸಶಸ್ತ್ರ ಪಡೆ ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT