ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸೋದ್ಯಮ ದಿನ; ವಿವಿಧ ಸ್ಪರ್ಧೆಗಳ ಆಯೋಜನೆ

Last Updated 20 ಸೆಪ್ಟೆಂಬರ್ 2022, 14:08 IST
ಅಕ್ಷರ ಗಾತ್ರ

ಮಡಿಕೇರಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದೆ.

ಸಾರ್ವಜನಿಕರಿಗೆ ‘ಅನ್‌ಸೀನ್‌ ಕೂರ್ಗ್‌’ ಕುರಿತು ಛಾಯಾಗ್ರಹಣ ಸ್ಪರ್ಧೆ ಏರ್ಪಡಿಸಲಾಗಿದ್ದು, ಮೊಬೈಲ್ ಹಾಗೂ ಕ್ಯಾಮೆರಾದಲ್ಲಿ ತೆಗೆದ ಚಿತ್ರಗಳನ್ನು ಕಳುಹಿಸಬಹುದು. ಆಯ್ದ ಚಿತ್ರಗಳನ್ನು ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಇರಲಿದೆ. ಜತೆಗೆ, ‘ಪ್ರವಾಸೋದ್ಯಮ ಮತ್ತು ಅಭಿವೃದ್ಧಿ’ ಕುರಿತು 2 ನಿಮಿಷಗಳ ಕಿರುಚಿತ್ರ ಸ್ಪರ್ಧೆಯೂ ಇರಲಿದೆ.

ವಿದ್ಯಾರ್ಥಿಗಳಿಗಾಗಿ ‘ಪ್ರವಾಸೋದ್ಯಮದ ಪುನರಾವಲೋಕನ’ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ 1 ಸಾವಿರ ಪದಗಳ ಮಿತಿ, ಕಾಲೇಜು ವಿದ್ಯಾರ್ಥಿಗಳಿಗೆ 2 ಸಾವಿರ ಪದಗಳ ಮಿತಿ ಇದೆ. ಪ್ರತಿ ವಿಭಾಗದಲ್ಲಿಯೂ 3 ಬಹುಮಾನಗಳಿವೆ.

ಛಾಯಾಚಿತ್ರ, ಕಿರುಚಿತ್ರ, ಪ್ರಬಂಧಗಳನ್ನು adkodagutourism@gmail.com ವಿಳಾಸಕ್ಕೆ ಕಳುಹಿಸಬೇಕು. ವಿಳಾಸ, ಮೊಬೈಲ್‌ ಸಂಖ್ಯೆ, ವಿದ್ಯಾರ್ಥಿಗಳು ಕಲಿಯುತ್ತಿರುವ ಶಾಲೆಯ ಹೆಸರುಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಭಾಗವಹಿಸುವ ಎಲ್ಲರಿಗೂ ಪ್ರಮಾಣಪತ್ರ ನೀಡಲಾಗುತ್ತದೆ. ಪ್ರವೇಶಕ್ಕೆ ಸೆ.24 ಕೊನೆಯ ದಿನ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT