ಮೈಸೂರಿನ ಎಂಜಿನಿಯರುಗಳ ಸಂಸ್ಥೆಯ ಸಭಾಂಗಣದಲ್ಲಿ ಸೆ.30ರಂದು ಬೆಳಿಗ್ಗೆ 10.30ಕ್ಕೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಕಾರ್ಯಕ್ರಮವನ್ನು ಮಾಜಿ ಗೃಹ ಸಚಿವ ಪಿ.ಜಿ.ಆರ್.ಸಿಂಧ್ಯಾ ಉದ್ಘಾಟಿಸಲಿದ್ದು, ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಅವರು ಕೃತಿ ಲೋಕಾರ್ಪಣೆ ಮತ್ತು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.