ಕುಶಾಲನಗರ: ತಾಲ್ಲೂಕಿನ ಕೂಡಿಗೆ ಭಾಗದಲ್ಲಿ ಬುಧವಾರ ಸಂಜೆ ಸುರಿದ ಬಾರಿ ಗಾಳಿ ಮಳೆಗೆ ಹುದುಗೂರು ಗ್ರಾಮದ ಕೃಷಿಕ ರವೀಂದ್ರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದ್ದು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮರ ಬಿದ್ದು ಮೇಲ್ಛಾವಣಿಗೆ ಹಾನಿಯಾಗಿದ್ದು, ಜೊತೆಗೆ ಕೆಲವು ದಿನಗಳ ಹಿಂದೆ ಕಟಾವು ಮಾಡಿ ಒಕ್ಕಲುತನ ಮಾಡಿ ಸಂಗ್ರಹಿಸಿಟ್ಟಿದ್ದ ಭತ್ತದ ಚೀಲಗಳು ಮಳೆಗೆ ಸಿಲುಕಿ ಒದ್ದೆಯಾಗಿವೆ. ಮನೆಯ ವಸ್ತುಗಳು ಹಾಳಾಗಿದ್ದು, ನಷ್ಟ ಉಂಟಾಗಿದೆ. ಸ್ಥಳಕ್ಕೆ ಆಗಮಿಸಿದ ವಿ.ಪಿ.ಶಶಿಧರ್ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭ ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯರಾದ ಅನಂತು, ಶಿವಕುಮಾರ್ ಎಚ್.ಎಸ್ ರವಿ ಹಾಗೂ ಗ್ರಾಮಸ್ಥರಾದ ಚಿದಂಬರಂ, ಸುರೇಶ್, ಗಣೇಶ್, ರಜಿನಿ, ಸಂತೋಷ್, ಹಸೇನರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.