ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶನಿವಾರಸಂತೆ: ಹಿರಿಯ ಸಾಹಿತಿ ಎಸ್.ಸಿ.ರಾಜಶೇಖರ್ ಸ್ಮರಣೆ

Published 15 ಜನವರಿ 2024, 6:50 IST
Last Updated 15 ಜನವರಿ 2024, 6:50 IST
ಅಕ್ಷರ ಗಾತ್ರ

ಶನಿವಾರಸಂತೆ: ಈಚೆಗೆ ನಿಧನರಾದ ಜಿಲ್ಲೆಯ ಹಿರಿಯ ಸಾಹಿತಿ ಎಸ್.ಸಿ.ರಾಜಶೇಖರ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಶನಿವಾರಸಂತೆ ಹೋಬಳಿ ಘಟಕದ ವತಿಯಿಂದ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.

ಶನಿವಾರಸಂತೆ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ‘ಸೋಮವಾರಪೇಟೆ ತಾಲ್ಲೂಕಿನಲ್ಲಿ ಕನ್ನಡ ಸಾಹಿತ್ಯ ಅಭಿವೃದ್ಧಿಗೆ ಶ್ರಮಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರಾಜಶೇಖರ್ ಮಾಸ್ಟರ್ ಅವರ ಸೇವೆ ಅಪಾರವಾಗಿದೆ. ಅಂದಿನ ಕಾಲದಲ್ಲಿ ಕನ್ನಡದ ಅಭಿಮಾನಿಗಳಲ್ಲಿ ಕನ್ನಡ ಬೆಳೆಸುವ ದೃಷ್ಟಿಯಿಂದ ಸಾಹಿತ್ಯ ಪರಿಷತ್ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಮ್ಮನ್ನೆಲ್ಲರನ್ನು ಪ್ರೇರೇಪಿಸುತ್ತಿದ್ದರು’ ಎಂದು ಸ್ಮರಿಸಿದರು.

ಅವರು ಪ್ರತಿಯೊಂದು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ಭಾಷೆ, ನೆಲ, ಜಲವನ್ನು ಉಳಿಸುವಂತೆ ಎಲ್ಲರಲ್ಲಿಯೂ ತಿಳಿಸುತ್ತಿದ್ದರು. ಅವರ ಸೇವೆಯನ್ನು ಸ್ಮರಿಸಿ ನಾವು ಈ ಶ್ರದ್ಧಾಂಜಲಿ ಅರ್ಪಿಸುವುದು ಕನ್ನಡ ಸಾಹಿತ್ಯ ಅಭಿಮಾನಿಗೆ ಸಲ್ಲಿಸುತ್ತಿರುವ ಗೌರವವಾಗಿದೆ ಎಂದರು.

ಈ ವೇಳೆ ಶನಿವಾರಸಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಬಿ.ನಾಗರಾಜ್, ಕಾರ್ಯದರ್ಶಿ ಎಂ.ಪಿ.ಮೋಹನ್, ಖಜಾಂಚಿ ಶಿವಣ್ಣ, ಸದಸ್ಯ ಡಿ.ಬಿ.ಸೋಮಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT