ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜನರಲ್ ಜನರಲ್ ತಿಮ್ಮಯ್ಯ ಅವರ 118 ನೇ ಜನ್ಮದಿನ ಆಚರಣೆ | ವೀರ ಸೇನಾನಿಗೆ ನಮನ

ಜನರಲ್ ಜನರಲ್ ತಿಮ್ಮಯ್ಯ ಅವರ 118 ನೇ ಜನ್ಮದಿನ ಆಚರಣೆ
Published 1 ಏಪ್ರಿಲ್ 2024, 5:54 IST
Last Updated 1 ಏಪ್ರಿಲ್ 2024, 5:54 IST
ಅಕ್ಷರ ಗಾತ್ರ

ಮಡಿಕೇರಿ: ವೀರಸೇನಾನಿ ಜನರಲ್ ಜನರಲ್ ತಿಮ್ಮಯ್ಯ ಅವರ 118 ನೇ ಜನ್ಮದಿನವನ್ನು ಕೊಡಗು ಜಿಲ್ಲೆಯ ಹಲವೆಡೆ ಭಾನುವಾರ ಆಚರಿಸಲಾಯಿತು. ಜಿಲ್ಲಾಡಳಿತದ ವತಿಯಿಂದ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ, ಮಡಿಕೇರಿ ಕೊಡವ ಸಮಾಜ ಹಾಗೂ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವತಿಯಿಂದ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ಬಳಿ, ಜೈ ಜವಾನ್ ಮಾಜಿ ಸೈನಿಕರ ಸಂಘದಿಂದ ಸೋಮವಾರಪೇಟೆಯ ಸಂಘದ ಕಚೇರಿಯಲ್ಲಿ ಸೇರಿದಂತೆ ಹಲವೆಡೆ ಆಚರಿಸಲಾಯಿತು.

ಮಡಿಕೇರಿ ಕೊಡವ ಸಮಾಜ ಹಾಗೂ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಜನರಲ್ ತಿಮ್ಮಯ್ಯ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

ಕೊಡವ ಸಮಾಜದ ಪದಾಧಿಕಾರಿಗಳು, ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಎನ್‍ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸಹ ವೀರ ಸೇನಾನಿಗೆ ಗೌರವ ನಮನ ಸಲ್ಲಿಸಿದರು.

ಕೊಡವ ಸಮಾಜದ ಉಪಾಧ್ಯಕ್ಷ ಕೇಕಡ ವಿಜುದೇವಯ್ಯ, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿದೇಶಕರಾದ ಪುತ್ತರಿರ ಕರುಣ್ ಕಾಳಯ್ಯ, ನಂದಿನೆರವಂಡ ರವಿಬಸಪ್ಪ, ಕಾಳಚಂಡ ಅಪ್ಪಣ್ಣ, ಮಂಡಿರ ಸದಾ ಮುದ್ದಪ್ಪ, ಕನ್ನಂಡ ಕವಿತಾ ಬೊಳ್ಳಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಜನರಲ್ ತಿಮ್ಮಯ್ಯ ಶಾಲೆಯ ಪಾಂಶುಪಾಲರಾದ ಕಲ್ಮಾಡಂಡ ಸರಸ್ವತಿ, ಆಡಳಿತಾಧಿಕಾರಿ ಮುಕ್ಕಾಟಿರ ಪೊನಮ್ಮ, ಚೌರಿರ ಕಾವೇರಿ ಪೂವಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಚೊಟ್ಟೆಯಂಡ ಸಂಜು, ಅಜ್ಜಮಕ್ಕಡ ವಿನು, ಚೋಕಿರ ಅನಿತಾ, ತೆನ್ನಿರ ಮೈನಾ, ಕೊಕ್ಕಲೆರ ತಿಮ್ಮಯ್ಯ, ಓಡಿಯಂಡ ತಿಮ್ಮಯ್ಯ, ಶಾಂತೆಯಂಡ ನಿರನ್, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ಸದಸ್ಯ ಬಿ.ವೈ.ರಾಜೇಶ್, ಮಾಜಿ ಸದಸ್ಯ ಅಪ್ಪನೆರವಂಡ ಚುಮ್ಮಿ ದೇವಯ್ಯ, ಸಾಮಾಜಿಕ ಕಾರ್ಯಕರ್ತೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಔಷಧಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಅಂಬೆಕಲ್ ಜೀವನ್, ಮಾಜಿ ಸೈನಿಕರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಜಿಲ್ಲಾಡಳಿತ ವತಿಯಿಂದ ಭಾನುವಾರ ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 118ನೇ ಜನ್ಮ ದಿನಾಚರಣೆ ಪ್ರಯುಕ್ತ ಮಡಿಕೇರಿಯ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಪುಷ್ಪನಮನ ಸಲ್ಲಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಭಾಗವಹಿಸಿದ್ದರು
ಜಿಲ್ಲಾಡಳಿತ ವತಿಯಿಂದ ಭಾನುವಾರ ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 118ನೇ ಜನ್ಮ ದಿನಾಚರಣೆ ಪ್ರಯುಕ್ತ ಮಡಿಕೇರಿಯ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಪುಷ್ಪನಮನ ಸಲ್ಲಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಭಾಗವಹಿಸಿದ್ದರು

ಜಿಲ್ಲಾಧಿಕಾರಿಯಿಂದ ಗೌರವ ನಮನ

ಜಿಲ್ಲಾಡಳಿತ ವತಿಯಿಂದ ಭಾನುವಾರ ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 118ನೇ ಜನ್ಮ ದಿನಾಚರಣೆಯು ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ನಡೆಯಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ಜನರಲ್ ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಸುಬೇದಾರ್ ಗೌಡಂಡ ತಿಮ್ಮಯ್ಯ ಅವರು ಪುಷ್ಪ ನಮನ ಸಲ್ಲಿಸಿದರು. ವಿದ್ಯಾರ್ಥಿನಿ ಶ್ರೀಷಾ ಮಾತನಾಡಿ ‘ಭಾರತೀಯ ಸೇನಾ ಕ್ಷೇತ್ರಕ್ಕೆ ಜನರಲ್ ತಿಮ್ಮಯ್ಯ ಅವರ ಕೊಡುಗೆ ಅಪಾರ. ರಾಷ್ಟ್ರದ ಮಹಾದಂಡ ನಾಯಕರಾಗಿ ಸೇನಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ತಿಳಿಸಿದರು. ಜನರಲ್ ತಿಮ್ಮಯ್ಯ ಅವರು ರಾಷ್ಟ್ರಕಂಡ ಮಹಾನ್ ವೀರ ಸೇನಾನಿಯಾಗಿದ್ದು ಜನರಲ್ ತಿಮ್ಮಯ್ಯ ಅವರ ಸೇನಾ ಕ್ಷೇತ್ರದಲ್ಲಿನ ಅಪ್ರತಿಮ ಸಾಧನೆ ಛಲ ಸಾಮರ್ಥ್ಯ ಮತ್ತು ಪ್ರಬುದ್ಧತೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಹೇಳಿದರು. ಸಿಪಿಐ ಮಂಜುನಾಥ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅಭಿಮಾನಿ ಬಳಗದ ಮುನೀರ್ ಮಾಚರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT