ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು | ಮುಂದುವರಿದ ಮಳೆ; ರಸ್ತೆಗಳು ಜಲಾವೃತ, ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ

Published 23 ಜುಲೈ 2023, 7:53 IST
Last Updated 23 ಜುಲೈ 2023, 7:53 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ಭಾನುವಾರ ಮಳೆಯ ಅಬ್ಬರ ಮುಂದುವರಿದಿದೆ. ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನಾಪೋಕ್ಲು– ಮೂರ್ನಾಡು ಸಂಪರ್ಕ ರಸ್ತೆಯ ಹೊದ್ದೂರು ಬಳಿ ಬೊಳಿಬಾಣೆ ಎಂಬಲ್ಲಿ ರಸ್ತೆ ಜಲಾವೃತಗೊಂಡಿದೆ. ಭಾಗಮಂಡಲ– ನಾಪೋಕ್ಲು ರಸ್ತೆಯಲ್ಲೂ ನೀರು ಹರಿಯುತ್ತಿದೆ.

ಹಾರಂಗಿ ಜಲಾಶಯದಿಂದ 20 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿರುವುದರಿಂದ ಕಾವೇರಿ ನದಿ ತೀರದಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದೆ. ಈಗಾಗಲೇ ಅಣೆಕಟ್ಟೆಯ ಮುಂಭಾಗದ ಸೇತುವೆ ಜಲಾವೃತಗೊಂಡಿದೆ. ಮಳೆ ಇದೇ ರೀತಿ ಮುಂದುವರಿದೆ ತಗ್ಗುಪ್ರದೇಶಗಳಲ್ಲಿ ನೀರು ನುಗ್ಗುವ ಭೀತಿ ಎದುರಾಗಿದೆ.

ವಿರಾಜ‍ಪೇಟೆಯ ಭೇತ್ರಿಯ ಕಿಗ್ಗಾಲು ರಸ್ತೆಯ ಬದಿಯಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿದೆ. ನೀರಿನ ಮಟ್ಟ ನಿರಂತರವಾಗಿ ಏರಿಕೆ ಕಾಣುತ್ತಿದೆ. ಕರಡಿಗೋಡು ಗ್ರಾಮಕ್ಕೆ ಭಾನುವಾರ ಮಧ್ಯಾಹ್ನ ತಹಶೀಲ್ದಾರ ರಾಮಚಂದ್ರ ಭೇಟಿ ನೀಡಿ, ಇಲ್ಲಿನ ಕುಟುಂಬದವರಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮನವಿ ಮಾಡಿದರು.

‘ತಾಲ್ಲೂಕು ಆಡಳಿತ ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು, ಮಳೆ‌ ಇದೇ ರೀತಿ ಮುಂದುವರೆದಲ್ಲಿ ಪರಿಹಾರ ಕೇಂದ್ರಕ್ಕೆ ಎಲ್ಲರನ್ನೂ ಕಳುಹಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT