ಶನಿವಾರ, ಮೇ 15, 2021
29 °C
ಅರಮೇರಿ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣ; ಚಿನ್ನಾಭರಣ ವಶ

ಇಬ್ಬರು ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿರಾಜಪೇಟೆ: ಸಮೀಪದ ಅರಮೇರಿ ಗ್ರಾಮದ ಮನೆಯೊಂದಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಅರಮೇರಿ ಗ್ರಾಮದ ನಟೇಶ್ ಹಾಗೂ ಹುಣಸೂರಿನ ಆಜಾದ್‌ನಗರದ ನಿವಾಸಿ ಅಫ್ಸರ್ ಬಂಧಿತ ಆರೋಪಿಗಳು.

ಏ.4 ರಂದು ಸಮೀಪದ ಅರಮೇರಿ ಗ್ರಾಮದ ಪಿ. ನಂದ ಎಂಬುವವರ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ ₹3.67 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು. ಈ ಕುರಿತು ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹3.67 ಲಕ್ಷ ಮೌಲ್ಯದ ಚಿನ್ನಾಭರಣ, ₹29,250 ನಗದು ಹಾಗೂ ₹8 ಸಾವಿರ ಮೌಲ್ಯದ ಮೊಬೈಲ್ ಫೋನ್‌ಅನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಡಿವೈಎಸ್ಪಿ ಸಿ.ಟಿ.ಜಯಕುಮಾರ್ ನಿರ್ದೇಶನದಲ್ಲಿ, ಸಿಪಿಐ ಶ್ರೀಧರ್ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಠಾಣೆಯ ಎಸ್ಐ ಸಿದ್ದಲಿಂಗ ಬಾನಸೆ, ನಗರ ಅಪರಾಧ ದಳದ ಎಸ್ಐ ಭೋಜಪ್ಪ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಎಸ್ಐ ಶ್ರೀಧರ್, ಸಿಬ್ಬಂದಿಗಳಾದ ತೀರ್ಥಕುಮಾರ್, ರಾಮಪ್ಪ, ರವಿ, ನೆಹರು, ಮುಸ್ತಫಾ, ಚಂದ್ರಶೇಖರ್, ಪ್ರದೀಪ್, ಈರಪ್ಪ, ರಾಜೇಶ್, ಗಿರೀಶ್, ಮಹೇಶ್ ಹಾಗೂ ಸಂದೀಪ್ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.