ಗುರುವಾರ , ಆಗಸ್ಟ್ 11, 2022
27 °C

ಹುಲಿ ದಾಳಿಗೆ ಎರಡು ಹಸು ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪೊನ್ನಂಪೇಟೆ: ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿವೆ.

ಬೆಸಗೂರು ಗ್ರಾಮದ ಪೊನ್ನಿಮಾಡ ದೊರೆ ಗಣಪತಿ ಅವರ ಕೊಟ್ಟಿಗೆಯಲ್ಲಿ ಶುಕ್ರವಾರ ರಾತ್ರಿ ಹುಲಿ ದಾಳಿ ಮಾಡಿ, ಹಸುವಿನ ಅರ್ಧ ಭಾಗ ತಿಂದು ಹೋಗಿದೆ.

ದೇವನೂರು ಗ್ರಾಮದ ಲಕ್ಷ್ಮೀಕಾಂತ್ ಅವರ ಹಸುವನ್ನು ಶನಿವಾರ ಮುಂಜಾನೆ ಮನೆಯ ಸಮೀಪ ಹುಲಿ ಕೊಂದು  ಕಳೇಬರವನ್ನು ಬಿಟ್ಟು ತೆರಳಿದೆ. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಅರಣ್ಯ ಇಲಾಖೆ ಕಾಡುಪ್ರಾಣಿಗಳಿಂದ ಜಾನುವಾರುಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ತಾಲ್ಲೂಕು ಕೃಷಿ ಮೋರ್ಚಾ ಅಧ್ಯಕ್ಷ ಕಟ್ಟೇರ ಈಶ್ವರ ತಿಮ್ಮಯ್ಯ ಒತ್ತಾಯಿಸಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು