ಕಲಬುರಗಿ: ‘ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ಮಾಡದಂತೆ, ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಅವಮಾನಿಸುವುದು, ಮಾನಸಿಕ ಹಿಂಸೆಯನ್ನು ತಡೆಯಲು ವಿಶ್ವವಿದ್ಯಾಲಯ ಧನಸಹಾಯ ಆಯೋಗವು (ಯುಜಿಸಿ) ಹೊಸ ಕಾಯ್ದೆ ಜಾರಿಗೆ ಮುಂದಾಗಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ರಾಜ್ಯ ಸಂಚಾಲಕ ಅರ್ಜುನ ಭದ್ರೆ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘2026ರಲ್ಲಿ ಹೈದರಾಬಾದ್ನ ಕೇಂದ್ರೀಯ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಹಾಗೂ 2019ರಲ್ಲಿ ಮುಂಬೈನ ಟೋಪಿವಾಲಾ ನ್ಯಾಷನಲ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಯಲ್ ಅವರು ಜಾತಿ ಭೇದದ ಅವಮಾನದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗಿನ ಹೊಸ ನಿಮಯಮದಿಂದ ಶೋಷಿತ ವರ್ಗಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟರು.

‘ಯುಜಿಸಿಯ ಹೊಸ ನಿಮಯದಡಿ ಕಾಲೇಜು ಮತ್ತು ವಿವಿಗಳಲ್ಲಿ ಸಮಾನ ಅವಕಾಶ ಕೇಂದ್ರ (ಇಒಸಿ) ಸ್ಥಾಪಿಸಿ, ಅದರಲ್ಲಿ ತಲಾ ಒಬ್ಬರು ಎಸ್ಸಿ, ಎಸ್ಸಿ, ಹಿಂದುಳಿದ ಮಹಿಳೆ ಹಾಗೂ ಅಂಗವಿಕಲರ ಸಮಿತಿ ರಚನೆ ಮಾಡಲಾಗಿದೆ. ಶೋಷಿತ ಸಮುದಾಯದ ವಿದ್ಯಾರ್ಥಿಗಳ ಮೇಲೆ ಜಾತಿ ಆಧಾರಿತ ತಾರತಮ್ಯ ನಡೆದರೆ ಅದನ್ನು ಈ ಸಮಿತಿ ವರದಿ ಮಾಡಲಿದ್ದು, ಅದರ ಆಧಾರದ ಮೇಲೆ ತಾರತಮ್ಯ ಮಾಡಿದ ವಿದ್ಯಾರ್ಥಿಗಳು ಹಾಗೂ ಬೋಧಕರ ಮೇಲೆ ಕ್ರಮ ಜರುಗಿಸುವುದು ನಿಯಮದಲ್ಲಿದೆ’ ಎಂದರು.

‘ಈ ಕಾನೂನನ್ನು ವಿರೋಧಿಸಿ ಮೇಲ್ವರ್ಗದ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡುವುದನ್ನು ನಮ್ಮ ಸಮಿತಿ ಉಗ್ರವಾಗಿ ಖಂಡಿಸುತ್ತದೆ. ಸುಪ್ರೀಂ ಕೋರ್ಟ್ ಕೂಡ ಈ ಕಾಯ್ದೆಗೆ ತಡೆ ನೀಡಿದ್ದು, ವಿಷಾದನೀಯವಾಗಿದೆ. ಯುಜಿಸಿಯ ಹೊಸ ಕಾಯ್ದೆ ಜಾರಿ ಮಾಡಲು ವಿರೋಧ ವ್ಯಕ್ತಪಡಿಸುತ್ತಿರುವ ಶಕ್ತಿಗಳ ಹಿಂದೆ ಕೇಂದ್ರ ಸರ್ಕಾರ ಮತ್ತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಪಿತೂರಿ ಇದೆ. ಈ ಹಿನ್ನೆಲೆಯಲ್ಲಿ ಫೆಬ್ರುವರಿ 8ರಂದು ಸಭೆ ಸೇರಿ ಹೋರಾಟ ರೂಪಿಸಲು ತೀರ್ಮಾನಿಸಲಾಗುವುದು’ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಯನ ಕ್ರಾಂತಿ, ಸೂರ್ಯಕಾಂತ ಆಜಾದಪೂರ, ಸುಭಾಷ್ ಕಲ್ಮೂರೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.