ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಜಪೇಟೆ:‌ ದಾಖಲೆಯಿಲ್ಲದ ₹ 95 ಸಾವಿರ ನಗದು ವಶ

Published 13 ಏಪ್ರಿಲ್ 2024, 13:52 IST
Last Updated 13 ಏಪ್ರಿಲ್ 2024, 13:52 IST
ಅಕ್ಷರ ಗಾತ್ರ

ವಿರಾಜಪೇಟೆ:‌ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ₹ 95 ಸಾವಿರ‌ನ್ನು ಸಮೀಪದ ಪೆರುಂಬಾಡಿಯಲ್ಲಿನ ಚೆಕ್‌ಪೋಸ್ಟ್‌ನಲ್ಲಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು- ಕೇರಳ ಗಡಿಭಾಗವಾದ ಪೆರುಂಬಾಡಿ ಚೆಕ್‌ಪೋಸ್ಟ್‌ನಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿರುವಾಗ ಕೇರಳದ ಇರಿಟಿಯಿಂದ ಮೈಸೂರಿಗೆ ತೆರಳುತ್ತಿದ್ದ ಕಾರೊಂದರಲ್ಲಿ ನಗದು ಪತ್ತೆಯಾಗಿತ್ತು. ರಂಶೀದ್ ಎಂಬುವವರ ಬಳಿಯಿದ್ದ ದಾಖಲೆಯಿಲ್ಲದ ನಗದನ್ನು ವಶಕ್ಕೆ ಪಡೆದ ಅಧಿಕಾರಿಗಳು ಉಪ ಖಜಾನೆಗೆ ಒಪ್ಪಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ತಪಾಸಣೆ ಕೇಂದ್ರದಲ್ಲಿ ಶಿಕ್ಷಣ ಇಲಾಖೆಯ ವೆಂಕಟೇಶ್, ಕೃಷಿ ಇಲಾಖೆಯ ಅಶ್ವಿನ್‌ಕುಮಾರ್ ಮತ್ತು ಪೊಲೀಸ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT