ಕುಶಾಲನಗರ: ಪಟ್ಟಣದಲ್ಲಿ ಕಳೆದ 10 ವರ್ಷಗಳ ಹಿಂದೆ ಆರಂಭಗೊಂಡ ಒಳಚರಂಡಿ ಕಾಮಗಾರಿ ಇನ್ನೂ ಮುಗಿದಿಲ್ಲ. ಸರ್ಕಾರದಿಂದ ಬಿಡುಗಡೆಯಾದ ಕೋಟ್ಯಂತರ ರೂಪಾಯಿ ಅನುದಾನ ಬಳಕೆ ಹಾಗೂ ಕಾಮಗಾರಿ ಸ್ಥಿತಿಗತಿ ಕುರಿತು ತನಿಖೆಗೆ ಒಳಪಡಿಸಲು ಬುಧವಾರ ನಡೆದ ಪುರಸಭೆ ವಿಶೇಷ ಸಭೆಯಲ್ಲಿ ತೀರ್ಮಾನಿಸಲಾಯಿತು.

ಇಲ್ಲಿನ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಪುರಸಭಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಕುರಿತ ಸುದೀರ್ಘ ಚರ್ಚೆ ನಡೆಯಿತು.

‘ಕೋಟ್ಯಂತರ ರೂಪಾಯಿ ಅನುದಾನದ ಈ ಮಹತ್ವಾಕಾಂಕ್ಷಿ ಯೋಜನೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮುಗಿಯುವ ಲಕ್ಷಣ ಕಾಣುತ್ತಿಲ್ಲ’ ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿಂದೆ ಮುಂದಿನ 15 ದಿನಗಳಲ್ಲಿ ಯೋಜನೆ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದ ಜಲಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಸನ್ನ ಕುಮಾರ್ ಅವರನ್ನು ಸದಸ್ಯರು ತರಾಟೆಗೆ ತೆಗೆದುಕೊಂಡರು.

ಸದಸ್ಯ ಜೈವರ್ಧನ್, ಆನಂದ್ ಕುಮಾರ್, ಅಮೃತ್, ರೇಣುಕಾ, ಪ್ರಕಾಶ್, ಜಗದೀಶ್ ಮಾತನಾಡಿ, ತಮ್ಮ ಆಕ್ಷೇಪಗಳನ್ನು ವ್ಯಕ್ತಪಡಿಸಿದರು. ಇತರೆ ಸದಸ್ಯರೂ ಧ್ವನಿಗೂಡಿಸಿದರು. ಸದಸ್ಯರ ಒಮ್ಮತದ ಮೇರೆಗೆ ಒಳಚರಂಡಿ ಯೋಜನೆಯ ಕಾಮಗಾರಿ ಹಾಗೂ ಅನುದಾನ ಬಳಕೆ ಕುರಿತು ಉನ್ನತ ಅಧಿಕಾರಿಗಳ ಮಟ್ಟದಲ್ಲಿ ತನಿಖೆ ನಡೆಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸದಸ್ಯ ಅಮೃತ್ರಾಜ್ ಮಾತನಾಡಿ, ‘ಪುರಸಭೆಯಿಂದ ಅವೈಜ್ಞಾನಿಕ ರೀತಿಯಲ್ಲಿ ತೆರಿಗೆ ವಸೂಲಿ ಮಾಡಲಾಗುತ್ತಿದೆ’ ಎಂದು ದೂರಿದರು. ತೆರಿಗೆ ವ್ಯವಸ್ಥೆಯನ್ನು ಸರಿಪಡಿಸದೆ ಹೋದರೆ ನ್ಯಾಯಾಲಯದಿಂದ ತಡೆಯಾಜ್ಞೆ ತರಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡಿದರು.

‘ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಅಧ್ಯಕ್ಷೆ ಜಯಲಕ್ಷ್ಮಿ ಭರವಸೆ ನೀಡಿದರು.

ಸದಸ್ಯ ಪ್ರಕಾಶ್ ಮಾತನಾಡಿ, ‘ಗಂಧನಕೋಟೆ, ಕಾರು ಚಾಲಕರ ಬಡಾವಣೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ. ಆದ್ದರಿಂದ ಈ ಭಾಗದಲ್ಲಿ ಕೊಳವೆಬಾವಿ ತೆಗೆದು ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.

ಸದಸ್ಯ ಜಗದೀಶ್ ಮಾತನಾಡಿ, ‘ಗೊಂದಿಬಸವನಹಳ್ಳಿ, ಗಂಧದಕೋಟೆ ಭಾಗದಲ್ಲಿ ರಸ್ತೆ, ಚರಂಡಿಗೆ ಸೂಕ್ತ ಅನುದಾನ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ಸದಸ್ಯೆ ಜಯಲಕ್ಷ್ಮಮ್ಮ ನಂಜುಂಡಸ್ವಾಮಿ ಮಾತನಾಡಿ, ‘ಮಾಂಸ ಮಾರುಕಟ್ಟೆ ಆವರಣದಲ್ಲಿ ಕಸ ವಿಂಗಡಣೆ ಮಾಡುತ್ತಿರುವ ಕ್ರಮ ಸರಿಯಲ್ಲ. ಇದರಿಂದ ಸುತ್ತ ಮುತ್ತ ನೋಣಗಳ ಹಾವಳಿ ಜಾಸ್ತಿಯಾಗಿ ಅನಾರೋಗ್ಯಕರ ವಾತಾವರಣ ನಿರ್ಮಾಣವಾಗುತ್ತಿದೆ. ಇದರಿಂದ ಮಾಂಸ ಖರೀದಿಗೂ ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಕಸವಿಂಗಡಣೆಯನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.

ಪುರಸಭೆಗೆ 2025-26ನೇ ಸಾಲಿನ 15ನೇ ಹಣಕಾಸು ಅನುದಾನ ಮತ್ತು ಎಸ್.ಎಫ್.ಸಿ. ಅನುದಾನದ ಎಸ್.ಟಿ.ಪಿ. ಮತ್ತು ಟಿ.ಎಸ್.ಪಿ ಅನುದಾನದ ಕ್ರಿಯಾಯೋಜನೆಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ವಾಹನ ಚಾಲಕರು ಹಾಗೂ ಲೋಡರ್ಗಳನ್ನು - ನೇಮಿಸಿಕೊಳ್ಳಲು ಟೆಂಡರ್ ಕರೆಯಲಾಗಿದ್ದು, ಆರ್ಥಿಕ ಬಿಡ್ಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಮುಖ್ಯಾಧಿಕಾರಿ ಟಿ.ಎಸ್.ಗಿರೀಶ್ ಮಾತನಾಡಿ, ‘ಪುರಸಭೆಗೆ 2025-26ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ₹ 109 ಲಕ್ಷ ಅನುದಾನ ಹಾಗೂ ಎಸ್.ಎಫ್.ಸಿ ಎಸ್.ಟಿ.ಪಿ. ಮತ್ತು ಟಿ.ಎಸ್.ಪಿ ಯೋಜನೆಯಡಿ ₹ 19 ಲಕ್ಷ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ನಿರ್ಬಂಧಿತಕ್ಕೆ ₹ 65.40 ಲಕ್ಷ ಹಾಗೂ ಅನಿರ್ಬಂಧಿತ ಯೋಜನೆಗಳಿಗೆ ₹ 43 ಲಕ್ಷ ಅನುದಾನ ಮೀಸಲಿಡಲಾಗಿದೆ. ಕುಡಿಯುವ ನೀರಿನ ಯೋಜನೆಗೆ ₹ 32.70 ಹಾಗೂ ಘನ ತ್ಯಾಜ್ಯವಸ್ತು ನಿರ್ವಹಣೆಗೆ ವಾಹನ ಖರೀದಿಗೆ ₹ 32.70 ಲಕ್ಷ ಅನುದಾನ ಕಾಯ್ದಿರಿಸಲಾಗಿದೆ’ ಎಂದು ತಿಳಿಸಿದರು.

ಉದ್ಯಾನ, ಬೀದಿದೀಪ, ಮಳೆನೀರು ಯೋಜನೆಯಡಿ ಕಾಮಗಾರಿ, ಪಾದಚಾರಿ ಮಾರ್ಗ ನಿರ್ಮಾಣ, ಕುಡಿಯುವ ನೀರು, ಚರಂಡಿ ವ್ಯವಸ್ಥೆ, ನೈರ್ಮಲ್ಯ ವ್ಯವಸ್ಥೆ, ಪೌರಕಾರ್ಮಿಕರಿಗೆ ಮನೆ ದುರಸ್ತಿ, ಪರಿಶಿಷ್ಟ ಜಾತಿ, ಪಂಗಡದವರಿಗೆ ಮನೆ ದುರಸ್ತಿ ಹಾಗೂ ವಿದ್ಯಾರ್ಥಿ ವೇತನ, ಪೌರ ಕಾರ್ಮಿಕರಿಗೆ ಆರೋಗ್ಯ ಚಿಕಿತ್ಸೆ ಉಳಿದ ಅನುದಾನವನ್ನು ಬಳಕೆ ಮಾಡಲಾಗುತ್ತದೆ ಎಂದು ಹೇಳಿದರು.

ಈ ವೇಳೆ ಪುರಸಭೆಯ ಉಪಾಧ್ಯಕ್ಷೆ ಪುಟ್ಟಲಕ್ಷ್ಮಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಹಿರಿಯ ಆರೋಗ್ಯ ಅಧಿಕಾರಿ ಉದಯಕುಮಾರ್, ಸದಸ್ಯರು ಹಾಗೂ ನಾಮನಿರ್ದೇಶಿತ ಸದಸ್ಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.