ಮಡಿಕೇರಿ: ಕಾರ್ಮಿಕ ಇಲಾಖೆಯಲ್ಲಿ ನೂತನವಾಗಿ ಜಾರಿಗೆ ತಂದಿರುವ ಯೋಜನೆಗಳಿಂದ ಕೊಡಗು ಜಿಲ್ಲೆಯಲ್ಲಿ ಅಸಂಘಟಿತ ವಲಯದ ಸುಮಾರು 60 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಅನುಕೂಲವಾಗಲಿದೆ. ಕೂಡಲೆ ಎಲ್ಲ ಅಸಂಘಟಿತ ವಲಯದ ಕಾರ್ಮಿಕರು ಇಲಾಖೆಯಲ್ಲಿ ನೋಂದಣಿ ಮಾಡಿಸಿ, ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆಯಿರಿ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದರು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ನಗರದಲ್ಲಿ ಕೊಡಗು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಮಂಡಳಿಯ ವಿವಿಧ ಯೋಜನೆಗಳ ಕುರಿತು ಬುಧವಾರ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಾರ್ಮಿಕ ಇಲಾಖೆಯಲ್ಲಿ 26 ರಿಂದ 101 ರೀತಿಯ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದೆ. ಈಚೆಗೆ ಸ್ವಿಗ್ಗಿ, ಜೊಮೆಟೋಗಳಂತ ಸಂಸ್ಥೆಯಲ್ಲಿ ಆಹಾರ ಸರಬರಾಜು ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್ ಕಾರ್ಡ್, ಪೋರ್ಟಲ್, ಫಾರ್ಮಸಿ, ಬ್ಲಿಂಕಿಟ್, ಬಿಗ್ ಬಾಸ್ಕೆಟ್, ಡೊಮಿನೋಜ್ ಮತ್ತಿತರ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಇದು ದೇಶದಲ್ಲೇ ಮೊದಲೆನಸಿದೆ ಎಂದರು.

ಆಟೊ ಚಾಲಕರು, ಪೇಯ್ಟಿಂಗ್ ಮಾಡುವವರು ಸೇರಿದಂತೆ ಹಲವರನ್ನೂ ಒಳಗೊಳ್ಳುವಂತೆ ಯೋಜನೆ ರೂಪಿಸಲಾಗಿದೆ. ಅಸಂಘಟಿತ ಕಾರ್ಮಿಕರು ಅಪಘಾತದಲ್ಲಿ ಮೃತರಾದಲ್ಲಿ ₹ 5 ಲಕ್ಷದವರೆಗೂ ಪರಿಹಾರ ವಿತರಿಸಲಾಗುತ್ತದೆ ಎಂದು ತಿಳಿಸಿದರು.

ರಾಷ್ಟ್ರದಲ್ಲಿ ಶೇ 90ರಷ್ಟು ಅಸಂಘಟಿತ ಕಾರ್ಮಿಕರಿದ್ದು, ಸಣ್ಣ ಸಣ್ಣ ಕಸುಬು ಮಾಡುತಿದ್ದಾರೆ. ಅಂತಹ 101 ವೃತ್ತಿಯನ್ನು ಗುರುತಿಸಲಾಗಿದೆ ಎಂದರು.

ಬಿಜೆಪಿ ವಿರುದ್ಧ ವಾಗ್ದಾಳಿ

ಯುಪಿಎ ಸರ್ಕಾರ ಇದ್ದ ಅವಧಿಯಲ್ಲಿ ಸಾಲ ಎಷ್ಟು ಇತ್ತು, ಈಗ ಕಳೆದ 11 ವರ್ಷದಲ್ಲಿ ಎಷ್ಟು ಸಾಲವಾಗಿದೆ ಎಂದು ಅವಲೋಕನ ಮಾಡಬೇಕು. ಕಪ್ಪು ಹಣ ತರುತ್ತೇವೆ ಎಂದಿದ್ದು, ₹ 15 ಲಕ್ಷ ಎಲ್ಲರ ಖಾತೆಗಳಿಗೆ ಹಾಕುತ್ತೇವೆ ಎಂದು ಬಿಜೆಪಿ ಭರವಸೆ ನೀಡಿದ್ದನ್ನು ಎಲ್ಲರೂ ಮರೆತರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಮಿಕ ಇಲಾಖೆ ಆಯುಕ್ತ ಡಾ.ಎನ್.ಗೋಪಾಲಕೃಷ್ಣ ಭಾರತ ಸಂವಿಧಾನ ಪೀಠಿಕೆ ವಾಚಿಸಿದರು. ಗಿರೀಶ್ ನಾಡಗೀತೆ ಹಾಡಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಮುಖಂಡರಾದ ಮುಂಡರಗಿ ನಾಗರಾಜ್, ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಕಾವೇರಿ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ, ಎಸ್.ಶಶಿಧರ, ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನ್, ಉಪ ಕಾರ್ಮಿಕ ಆಯುಕ್ತ ಎಚ್.ಎಲ್.ಗುರುಪ್ರಸಾದ್ ಭಾಗವಹಿಸಿದ್ದರು.

ಸೂರಿಗಾಗಿ ಶಾಸಕ ಡಾ.ಮಂತರ್ಗೌಡ ಮನವಿ

ಶಾಸಕ ಡಾ.ಮಂತರ್ಗೌಡ ಮಾತನಾಡಿ ‘ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರು ಸಾಕಷ್ಟು ಸಂಖ್ಯೆಯಲ್ಲಿದ್ದು ತೋಟಗಳಲ್ಲಿ ವಾಸ ಮಾಡುತ್ತಿದ್ದಾರೆ. ಇವರಿಗೆ ಸೂರು ಒದಗಿಸಬೇಕು’ ಎಂದು ಸಚಿವ ಸಂತೋಷ್ ಎಸ್. ಲಾಡ್ ಅವರಲ್ಲಿ ಮನವಿ ಮಾಡಿದರು. ಅಸಂಘಟಿತ ಕಾರ್ಮಿಕರು ಭೂಮಿ ಹಾಗೂ ನಿವೇಶನ ಇಲ್ಲದೆ 60 ವರ್ಷಗಳವರೆಗೆ ತೋಟಗಳಲ್ಲಿ ದುಡಿಯುತ್ತಾರೆ. ನಿವೃತ್ತರಾದ ಬಳಿಕ ಮನೆ ಬಾಡಿಗೆ ಪಾವತಿಸಲು ಪರದಾಡುತ್ತಾರೆ. ಇವರಿಗೆ ಸೂರು ಕಲ್ಪಿಸುವ ಕಡೆಗೆ ಚಿಂತಿಸಬೇಕು ಎಂದು ಕೋರಿದರು. ಕಾರ್ಮಿಕ ಇಲಾಖೆಯಲ್ಲಿರುವ ಅನೇಕ ಯೋಜನೆಗಳನ್ನು ಕಾರ್ಮಿಕರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಯಾರಾದರೂ ಲಂಚ ಕೇಳಿದರೆ ನನ್ನ ಗಮನಕ್ಕೆ ತನ್ನಿ ಎಂದರು. ಪ್ರತಿಕ್ರಿಯಿಸಿದ ಸಚಿವ ಸಂತೋಷ್ ಲಾಡ್ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸೂರು ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಹಾಗೂ ವಸತಿ ಸಚಿವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಆಶಾದೀಪ’ವನ್ನು ಶ್ಲಾಘಿಸಿದ ಪೊನ್ನಣ್ಣ

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಮಾತನಾಡಿ ‘ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗೆ ‘ಆಶಾದೀಪ’ ಯೋಜನೆ ಜಾರಿಗೊಳಿಸಿದೆ. ಇದರಡಿ ಪರಿಶಿಷ್ಟ ಜಾತಿ ಪಂಗಡದವರನ್ನು ಕೆಲಸಕ್ಕೆ ನೇಮಿಸಿಕೊಂಡರೆ ಶೇ 50ರಷ್ಟು ಸಂಬಳವನ್ನು ಸರ್ಕಾರ ನೀಡಲಿದೆ. ಇಂತಹ 101 ಕಾರ್ಯಕ್ರಮಗಳು ಕಾರ್ಮಿಕ ಇಲಾಖೆಯಲ್ಲಿವೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದ ಬೇರೆ ಯಾವುದೇ ರಾಜ್ಯದಲ್ಲೂ ಇಂತಹ ಯೋಜನೆಗಳು ಇಲ್ಲ. ಹೊಸ ಹೊಸದಾಗಿ ಅಸಂಘಟಿತ ವಲಯದ ಕಾರ್ಮಿಕರನ್ನು ಸೇರ್ಪಡೆ ಮಾಡಿಕೊಂಡು ನಿರ್ಲಕ್ಷ್ಯಕ್ಕೆ ಒಳಗಾಗಿರುವ ವರ್ಗಗಳಿಗೆ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಪಟ್ಟಭದ್ರ ಹಿತಾಸಕ್ತಿಗಳ ವಿರೋಧ ಎದುರಿಸಬೇಕಾಗಿದೆ ಎಂದರು.

ಭಾವುಕರಾದ ಫಲಾನುಭವಿ ಗೌರಮ್ಮ

ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ಚಾಲಕರ ಕುಟುಂಬದವರಿಗೆ ₹ 5 ಲಕ್ಷ ಚೆಕ್ ಅನ್ನು ವಿತರಿಸಲಾಯಿತು. ಅಪಘಾತದಲ್ಲಿ ಮೃತಪಟ್ಟ ತಮ್ಮ ಪುತ್ರನ ಅಂಗಾಂಗ ದಾನ ಮಾಡಿದ್ದ ತಾಯಿ ಗೌರಮ್ಮ ಅವರು ಭಾವುಕರಾದರು. ಚೆಕ್ ಸ್ವೀಕರಿಸುತ್ತಲೇ ಕಣ್ಣೀರು ಹಾಕಿದರು. ಶಾಸಕ ಡಾ.ಮಂತರ್ಗೌಡ ಅಂಗಾಂಗ ದಾನ ಕುರಿತು ಮಾಹಿತಿ ನೀಡಿದಾಗ ಸಚಿವ ಸಂತೋಷ್ ಲಾಡ್ ಅವರಿಗೆ ನಮಿಸಿದರು. ಜೊತೆಗೆ ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ಚಾಲಕರ ಮಕ್ಕಳಿಗೆ ₹ 10 ಸಾವಿರ ಶೈಕ್ಷಣಿಕ ಸಹಾಯಧನ ನೋಂದಾಯಿತ 94 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ನ್ನು ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.