ಮಂಗಳವಾರ, ಡಿಸೆಂಬರ್ 10, 2019
16 °C

ಕೊಡಗಿನಲ್ಲಿ ಅಕಾಲಿಕ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾನುವಾರ ಇಡೀ ದಿನ ಉತ್ತಮ ಮಳೆಯಾಗಿದೆ. ಬೆಳಿಗ್ಗೆಯಿಂದ ಸಾಧಾರಣವಾಗಿ ಸುರಿಯುತ್ತಿದ್ದ ಮಳೆ, ಮಧ್ಯಾಹ್ನದ ಬಳಿಕ ಬಿರುಸು ಪಡೆದುಕೊಂಡಿತು. ಶನಿವಾರ ರಾತ್ರಿಯೂ ಜಿಲ್ಲೆಯ ಕೆಲವೆಡೆ ಉತ್ತಮ ಮಳೆ ಸುರಿದಿತ್ತು.

ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಅರೇಬಿಕಾ ಕಾಫಿ ಹಣ್ಣಾಗಿದ್ದು ಮಳೆಯಿಂದ ಉದುರುವ ಆತಂಕ ಎದುರಾಗಿದೆ.

ಮಡಿಕೇರಿ, ತಲಕಾವೇರಿ, ಭಾಗಮಂಡಲ, ಗೋಣಿಕೊಪ್ಪಲು, ನಾಪೋಕ್ಲು, ಬೆಟ್ಟಗೇರಿ, ಚೆಟ್ಟಿಮಾನಿ, ಅಪ್ಪಂಗಳ, ಕಾಟಕೇರಿ, ಮದೆನಾಡು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ. ಸೋಮವಾರಪೇಟೆ, ವಿರಾಜಪೇಟೆ ಭಾಗದಲ್ಲಿ ಮಧ್ಯಾಹ್ನ ನಂತರ ತುಂತುರು ಮಳೆ ಸುರಿಯಿತು. ಕುಶಾಲನಗರದಲ್ಲಿ ಮೋಡ ಕವಿದ ವಾತಾವರಣವಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು