ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಕೆ.ಬಾಡಗ, ನಾಲ್ಕೇರಿ ಹಾಗೂ ಪಾಲಿಬೆಟ್ಟ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಮಂಗಳವಾರ ಭೇಟಿ ನೀಡಿ ಚುನಾಯಿತ ಸದಸ್ಯರ ಸಮಾಲೋಚನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ‘ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ತಿಳಿಸಿದರು.

ಕೆ.ಬಾಡಗ ಹಾಗೂ ನಾಲ್ಕೇರಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾಡಿಗಳಿದ್ದು, ಇಲ್ಲಿನ ಜನರ ಜೀವನ ಮಟ್ಟ ಸುಧಾರಿಸುವಲ್ಲಿ ಕ್ರಮವಹಿಸಿ ಎಂದು ಹೇಳಿದರು.

ಕೆ.ಬಾಡಗ ಗ್ರಾಮ ಪಂಚಾಯಿತಿ ಅಧ್ಯಕ್ಷ ರಿತೇಶ್ ಬಿದ್ದಪ್ಪ ಮಾತನಾಡಿ, ‘ಚಿಕ್ಕ ಗ್ರಾಮ ಪಂಚಾಯಿತಿಯಾದರೂ ಸರ್ಕಾರದ ವಿವಿಧ ಯೋಜನೆಗಳ ಅನುದಾನವನ್ನು ಉತ್ತಮವಾಗಿ ಬಳಸಿಕೊಂಡು ಅಭಿವೃದ್ಧಿ ಸಾಧಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಸಹಾಯಕ ನಿರ್ದೇಶಕ ಎಂ.ಡಿ.ಶ್ರೀನಿವಾಸ್ ಮಾತನಾಡಿ, ‘ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ತೋಡು ಅಭಿವೃದ್ಧಿ, ಕೆರೆ ಅಭಿವೃದ್ಧಿ, ಕಾಂಕ್ರಿಟ್ ರಸ್ತೆ ಹಾಗೂ ಹಲವು ವೈಯಕ್ತಿಕ ಸೌಲಭ್ಯಗಳನ್ನು ನೀಡುವಲ್ಲಿ ಉತ್ತಮವಾಗಿ ಪ್ರಗತಿ ಸಾಧಿಸಿ, ವಿರಾಜಪೇಟೆ ತಾಲ್ಲೂಕಿನಲ್ಲಿ ಅತೀ ಹೆಚ್ಚು ಮನೆಗಳನ್ನು ಸೃಜಿಸಿದ ಗ್ರಾಮ ಪಂಚಾಯಿತಿಯಾಗಿದ್ದು, 2024-25ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ನೀಡುವ ಉತ್ತಮ ಗ್ರಾಮ ಪಂಚಾಯಿತಿ ರಾಜ್ಯ ಪ್ರಶಸ್ತಿ ಕೆ.ಬಾಡಗ ಗ್ರಾಮ ಪಂಚಾಯಿತಿಗೆ ಲಭಿಸಿದೆ’ ಎಂದು ಮಾಹಿತಿ ನೀಡಿದರು.

ನಂತರ, ಸರ್ಕಾರದಿಂದ ಬಿಡುಗಡೆಯಾದ 15ನೇ ಹಣಕಾಸಿನ ಖರ್ಚು, ವೆಚ್ಚಗಳ ಬಗ್ಗೆ ಮಾಹಿತಿಯನ್ನು ಪಡೆದು, ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್, ವಸತಿ ಹಾಗೂ ವಿವಿಧ ಯೋಜನೆಗಳ ಕುರಿತು ಚರ್ಚಿಸಲಾಯಿತು.

ಕೆ.ಬಾಡಗ ಹಾಗೂ ನಾಲ್ಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಿತೇಶ್ ಬಿದ್ದಪ್ಪ, ಸೋಮಯ್ಯ, ರಾಜ್ಯ 5ನೇ ಹಣಕಾಸು ಆಯೋಗದ ಸದಸ್ಯರಾದ ಆರ್.ಎಸ್.ಪಾಂಡೆ, ಮಹಮ್ಮದ್ ಸನಾವುಲ್ಲಾ, ಕೆಂಪೇಗೌಡ, ಕೆ.ಯಾಲಕ್ಕಿಗೌಡ, ಸುಪ್ರಸನ್ನ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸಿ.ಅಪ್ಪಣ್ಣ, ಸಹಾಯಕ ನಿರ್ದೇಶಕರಾದ ಎಂ.ಡಿ.ಶ್ರೀನಿವಾಸ್, ಹೇಮಂತ್ ಕುಮಾರ್, ಪಿ.ವಿ.ಶ್ರೀನಿವಾಸ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.