ಸೋಮವಾರ, ಡಿಸೆಂಬರ್ 9, 2019
20 °C

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಶಾಸಕ ಯು.ಟಿ. ಖಾದರ್ ಕಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ‘ಸಚಿವರು, ನೆರೆ ಸಂತ್ರಸ್ತರ ಕಣ್ಣೀರು ಒರೆಸುವುದನ್ನು ಬಿಟ್ಟು ರಾಜಕೀಯ ಹೇಳಿಕೆ ನೀಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಸಂತ್ರಸ್ತರ ಮನೆ ದುರಸ್ತಿಗೆ ವಿತರಿಸಿದ್ದ ಪರಿಹಾರದ ಚೆಕ್‌ಗಳೂ ಬೌನ್ಸ್‌ ಆಗುತ್ತಿವೆ. ಸರ್ಕಾರದ ಖಜಾನೆಯಲ್ಲೂ ಹಣವಿಲ್ಲ ಎಂದು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೈತ್ರಿ ಸರ್ಕಾರದ ಅವಧಿಯಲ್ಲಿ ಇಡೀ ದೇಶಕ್ಕೆ ಮಾದರಿ ಆಗುವಂತೆ ಸಂತ್ರಸ್ತರಿಗೆ ಪರಿಹಾರ ವಿತರಿಸಲಾಗಿತ್ತು. ಆದರೆ, ಬಿಜೆಪಿ ಸರ್ಕಾರ ಇದುವರೆಗೂ ಒಂದೇ ಒಂದು ಮನೆಯನ್ನೂ ನಿರ್ಮಿಸಿಕೊಡಲು ಸಾಧ್ಯವಾಗಿಲ್ಲ. ಆದರೆ ಸಚಿವರು ಆರೋಪ ಮಾಡುವಲ್ಲಿ ಕಾಲಹರಣ ಮಾಡುತ್ತಿದ್ದಾರೆ’ ಎಂದು ದೂರಿದರು.

ತ್ರಿಕೋನ ಸ್ಪರ್ಧೆ

ಉಪ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಇರಲಿದೆ. ಯಾರೊಂದಿಗೂ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆ ಇಲ್ಲ’ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.

ಮಡಿಕೇರಿ ತಾಲ್ಲೂಕಿನ ಕರ್ಣಂಗೇರಿ ಗ್ರಾಮದಲ್ಲಿ 2018ರ ನೆರೆ ಸಂತ್ರಸ್ತರಿಗೆ ನಿರ್ಮಿಸಿರುವ ಮನೆಗಳನ್ನು ವಿಧಾನ ಮಂಡಲದ ಕಾಗದ ಪತ್ರಗಳ ಸಮಿತಿ ಅಧ್ಯಕ್ಷ ಸಾ.ರಾ.ಮಹೇಶ್‌ ಹಾಗೂ ಸಮಿತಿ ಸದಸ್ಯರು ವೀಕ್ಷಿಸಿದರು.

ಪ್ರತಿಕ್ರಿಯಿಸಿ (+)