ಕುಶಾಲನಗರ: ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಅಂಗವಿಕಲರು ಸದುಪಯೋಗ ಪಡಿಸಿಕೊಂಡು ತಮ್ಮ ಜೀವನ ಮಟ್ಟವನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.

ಕೊಡಗು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಹಾಗೂ ಕುಶಾಲನಗರದ ಶ್ರೀ ಕಾವೇರಿ ಪೋಷಕರ ಸ್ವ ಸಹಾಯ ಸಂಘದ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಕಟ್ಟಡದಲ್ಲಿ ಆರಂಭಿಸಿರುವ ಸಮುದಾಯ ಪುನರ್ವಸತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಗವಿಕಲ ಮಕ್ಕಳ ಬಗ್ಗೆ ಪೋಷಕರು ಎಂದಿಗೂ ತಾತ್ಸಾರ ಮನೋಭಾವ ತಾಳಬಾರದು. ಹಲವು ಕಾರಣಗಳಿಂದ ದಿವ್ಯಾಂಗರಾಗಿ ಹುಟ್ಟುವ ಮಕ್ಕಳ ಪಾಲನೆ ಕಷ್ಟಸಾಧ್ಯವಾದರೂ ಅವರ ಬಗ್ಗೆ ಹೆಚ್ಚಿನ ಕಾಳಜಿ ಹೊಂದುವುದು ಅಗತ್ಯವಿದೆ. ಇಂತಹ ಪರಿಸ್ಥಿತಿಗೆ ಒಳಗಾಗಿರುವ ಹಲವರು ಸರ್ಕಾರದ ಮೂಲಕ ದೊರೆಯುವ ಸೌಲಭ್ಯಗಳನ್ನು ಪಡೆಯಲು ಇನ್ನೂ ಮುಂದಾಗಿಲ್ಲ. ಇಂತಹವರನ್ನು ಗುರುತಿಸಿ ಅಗತ್ಯ ಸಹಕಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಸಮುದಾಯ ಪುನರ್ವಸತಿ ಕೇಂದ್ರದಲ್ಲಿ ದೊರೆಯುವ ಆರೈಕೆಗಳ ಮೂಲಕ ಅವರಿಗೆ ಒಂದಷ್ಟು ಶಕ್ತಿ ತುಂಬುವ ಕೆಲಸವಾಗಲಿದೆ. ಸರ್ಕಾರದಿಂದ ದೊರೆಯುವ ಆರ್ಥಿಕ ನೆರವಿನ ಮಟ್ಟ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಅವರು ತಿಳಿಸಿದರು.
ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಉಪಾಧ್ಯಕ್ಷ ಡಾ. ಚಂದ್ರಶೇಖರ್ ಕೆ.ಎಸ್. ಮಾತನಾಡಿ, ಯೋಜನೆಯ ಬಗ್ಗೆ ಮಾಹಿತಿ ಒದಗಿಸಿದರು.

ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಕುಮಾರ್ ಕೆ.ಎಂ. ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದರು. ಸ್ವಾಮಿ ವಿವೇಕಾನಂದ ಯೂತ್ಮೂವ್ಮೆಂಟ್ ವತಿಯಿಂದ ಫಲಾನುಭವಿಗಳಿಗೆ ನೀಡಿದ ವೀಲ್ಚೇರ್ಗಳನ್ನು ಶಾಸಕರು ವಿತರಣೆ ಮಾಡಿದರು.

ಶ್ರೀ ಕಾವೇರಿ ಪೋಷಕರ ಸಂಘದ ಪ್ರತಿನಿಧಿ ದಿವ್ಯ ಮುಖೇಶ್ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜು, ಕುಶಾಲನಗರ ರೋಟರಿ ಮುಖ್ಯಸ್ಥ ಎಂ.ಡಿ.ರಂಗಸ್ವಾಮಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಅಧಿಕಾರಿ ವಿಮಲಾ ಕೆ.ಜಿ, ಸ್ವಾಮಿ ವಿವೇಕಾನಂದ ಯೂತ್ಮೂವ್ಮೆಂಟ್ನ ಆರೋಗ್ಯ ವಿಭಾಗ ಮುಖ್ಯಸ್ಥ ಡಾ.ಕುಮಾರ್ ಜಿ.ಎಸ್, ವೈವಿಧ್ಯತೆ ಮತ್ತು ಸೇರ್ಪಡೆ ವಿಭಾಗದ ನಿರ್ದೇಶಕಿ ಎಸ್.ಆರ್. ದೀಪಶ್ರೀ, ಕಾರ್ಯಕ್ರಮ ವ್ಯವಸ್ಥಾಪಕ ಅಂಕಾಚಾರಿ, ಬೆಂಗಳೂರಿನ ನ್ಯೂ ಸ್ಪೇಸ್ ಇಂಡಿಯಾದ ಮಾನವ ಸಂಪನ್ಮೂಲ ಹಾಗೂ ಆಡಳಿತ ವಿಭಾಗದ ಮುಖ್ಯ ವ್ಯವಸ್ಥಾಪಕಿ ಡಾ.ದೀಪಾಲಿ ಪ್ರಧಾನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.