ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ

ಮಡಿಕೇರಿಯಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಂದ ಆಕ್ರೋಶ
Published 2 ಜೂನ್ 2024, 6:14 IST
Last Updated 2 ಜೂನ್ 2024, 6:14 IST
ಅಕ್ಷರ ಗಾತ್ರ

ಮಡಿಕೇರಿ: ರಾಜ್ಯ ಪರಿಶಿಷ್ಟ ಪ‍ಂಗಡಗಳ ಅಭಿವೃದ್ಧಿ ಇಲಾಖೆ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಯುವಮೋರ್ಚಾದ ಕೊಡಗು ಜಿಲ್ಲಾ ಘಟಕದ ನೇತೃತ್ವದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೇರಿದ ಅವರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಭಿತ್ತಿಪತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಯುವ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ್‌ ತಿಮ್ಮಯ್ಯ, ‘ಸಚಿವ ಬಿ.ನಾಗೇಂದ್ರ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ, ಸರ್ಕಾರವೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ’ ಎಂದು ಆರೋಪಿಸಿದ ಅವರು, ‘ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಈ ಕುರಿತು ಕೂಲಂಕಷವಾದ ತನಿಖೆ ನಡೆಯಬೇಕು’ ಎಂದು ಆಗ್ರಹಿಸಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ ಮಾತನಾಡಿ, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಕಿಡಿಕಾರಿದರು.

ಬಿಟ್ಟಿ ಭಾಗ್ಯಗಳಿಗಾಗಿ ಹಣ ಹೊಂದಿಸಲು ಸಾಧ್ಯವಾಗದೇ ಪರದಾಡುತ್ತಿರುವ ಸರ್ಕಾರ ಇದೀಗ ವಿವಿಧ ಇಲಾಖೆಗಳ ಅಧಿಕಾರಿಗಳ ಮೇಲೆ ಹಣಕ್ಕಾಗಿ ಒತ್ತಡ ಹೇರುತ್ತಿದೆ. ಇದಕ್ಕೆ ಈಚೆಗೆ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಪ್ರಕರಣವೇ ಸಾಕ್ಷಿ ಎಂದರು.

‘ಇದೇ ಬಗೆಯ ವಿಪರೀತ ಒತ್ತಡ ಎಲ್ಲ ಅಧಿಕಾರಿಗಳ ಮೇಲೆ ಇದೆ’ ಎಂದು ಆರೋಪಿಸಿದ ಅವರು, ‘ಕೂಡಲೇ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು. ಇಲ್ಲವೇ, ಸಂಪುಟದಿಂದ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಕೂಡಲೇ ಅವರನ್ನು ಬಂಧಿಸಬೇಕು’ ಎಂದು ಒತ್ತಾಯಿಸಿದರು.

ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಬಿಜೆಪಿ ಮುಖಂಡರಾದ ಮಹೇಶ್‌ಜೈನಿ, ಮನುಮಂಜುನಾಥ, ಅರುಣ್‌ಕುಮಾರ್, ಕೆ.ಎಸ್.ರಮೇಶ್, ಎಸ್.ಸಿ.ಸತೀಶ್‌, ಅರುಣ್ ಶೆಟ್ಟಿ, ಸವಿತಾ ರಾಕೇಶ್, ವಿ.ಕೆ.ಲೋಕೇಶ್, ಪಿ.ಎಂ.ರವಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT