ಸುಂಟಿಕೊಪ್ಪ: ಕೇಂದ್ರ ಸರ್ಕಾರ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (ಮನರೇಗಾ) ಕಾಯ್ದೆಯ ಬದಲಿಗೆ ಹೊಸದಾಗಿ ಜಾರಿಗೆ ತಂದಿರುವ ‘ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ’ (ವಿಬಿ– ಜಿ ರಾಮ್ ಜಿ) ಕಾಯ್ದೆಯನ್ನು ವಿರೋಧಿಸಿ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಸಭಾತ್ಯಾಗ ಮಾಡಿದರು.

ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಪಿಡಿಒ ವಿ.ಜಿ.ಲೋಕೇಶ್ ಅವರು ಕೇಂದ್ರದ ಸುತ್ತೋಲೆಯಲ್ಲಿ ಈ ಕುರಿತು ಪ್ರಸ್ತಾಪಿಸಿದಾಗ ಪಂಚಾಯಿತಿ ಸದಸ್ಯರಾದ ಎಚ್.ಯು.ರಫೀಕ್ಖಾನ್ ಅವರು ವಿರೋಧ ವ್ಯಕ್ತಪಡಿಸಿದರಲ್ಲದೆ, ಸಭಾ ನಡಾವಳಿಯಲ್ಲಿ ವಿರೋಧವನ್ನು ಲಿಖಿತವಾಗಿ ಬರೆಸಿದರು. ಮನರೇಗಾ ಯೋಜನೆಯನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ಸಭಾತ್ಯಾಗ ಮಾಡಿದ ಬಳಿಕ ಹೊರಬಂದು ‘ಕೇಂದ್ರ ಸರ್ಕಾರವು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಯ ಹೆಸರನ್ನು ಬದಲಾಯಿಸಿರುವುದಕ್ಕೆ ಧಿಕ್ಕಾರ ಕೂಗಿದರು.

ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರಾದ ಪಿ.ಎಫ್. ಸಬಾಸ್ಟೀನ್, ಆಲಿಕುಟ್ಟಿ, ಶಬೀರ್, ನಾಗರತ್ನ ಸುರೇಶ್ ಹಾಗೂ ರೇಷ್ಮಾ ಅವರು ಎಚ್.ಯು ರಫೀಕ್ಖಾನ್ಗೆ ಬೆಂಬಲ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.