ಸೋಮವಾರಪೇಟೆ: ಹಿರಿಯೂರಿನ ವಿಶ್ವ ಕನ್ನಡ ಕಲಾ ಸಂಸ್ಥೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನೀಡುವ ವೀರ ವನಿತೆ ಪ್ರಶಸ್ತಿಗೆ ಶನಿವಾರಸಂತೆಯ ಸಾಹಿತಿ ಲಾವಣ್ಯ ಮೋಹನ್ ಭಾಜನರಾಗಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ಚಲನಚಿತ್ರ ನಟಿ ತಾರ ಅನುರಾಧ ಅವರು ಲಾವಣ್ಯ ಮೋಹನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿದರು. ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಹಲವು ಕೃತಿಗಳನ್ನು ರಚಿಸಿರುವ ಲಾವಣ್ಯ ಮೋಹನ್ ಕೊಡಗು ಜಿಲ್ಲೆಯ ಪ್ರತಿಭಾವಂತ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ.
ಅವರು ಕವನ, ಲೇಖನ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಇತ್ತೀಚೆಗೆ ನಡೆದ ಒಂಬತ್ತನೇ ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರ ಪುಷ್ಕರಣಿ ಕವನ ಸಂಕಲನ ಬಿಡುಗಡೆಗೊಳಿಸಿದ್ದರು. ಸಾಹಿತ್ಯದ ಜೊತೆಗೆ ಸಾಮಾಜಿಕ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಪ್ರಶಸ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಚಿತ್ರಸಂತೆ ಸಂಸ್ಥೆಯ ಅಧ್ಯಕ್ಷ ಗಿರೀಶ್, ನಿವೃತ್ತ ಯೋಧ ಗುರುರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.