ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಪೋಕ್ಲು: ಪೊಲೀಸರಿಂದ ವಾಹನ ತಪಾಸಣೆ

Published 7 ಜೂನ್ 2024, 4:33 IST
Last Updated 7 ಜೂನ್ 2024, 4:33 IST
ಅಕ್ಷರ ಗಾತ್ರ

ನಾಪೋಕ್ಲು: ಪಟ್ಟಣ ವ್ಯಾಪ್ತಿಯಲ್ಲಿ ಪೊಲೀಸರು ಗುರುವಾರ ವಾಹನ ತಪಾಸಣೆ ನಡೆಸಿದರು.

ಸೂಕ್ತ ದಾಖಲಾತಿ ಇಲ್ಲದೆ ವಾಹನ ಚಲಾಯಿಸುವವರ ವಿರುದ್ಧ ಹಾಗೂ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ ಮಾಡುವವರ ವಿರುದ್ಧ ಕ್ರಮ ಕೈಗೊಂಡರು.

ಇಲ್ಲಿನ ಕೊಡವ ಸಮಾಜದ ರಸ್ತೆಯಲ್ಲಿ ಎರಡೂ ಬದಿಗಳು ವಾಹನ ಪಾರ್ಕಿಂಗ್ ಮಾಡುತ್ತಿದ್ದ ಪರಿಣಾಮ ವಾಹನಗಳ ದಟ್ಟಣೆಯಿಂದ ಸಮಸ್ಯೆ ಉದ್ಭವಿಸಿರುವುದರ ಕುರಿತು ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿತ್ತು. ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದರು. ಗುರುವಾರ ಪೊಲೀಸರು ಎಸ್ಐ ಮಂಜುನಾಥ ನೇತೃತ್ವದಲ್ಲಿ ತಪಾಸಣೆ ನಡೆಸಿದರು.

ಪಟ್ಟಣದಲ್ಲಿ ಸಂಚರಿಸುವ ಆಟೋರಿಕ್ಷಾಗಳಿಗೆ ಎನ್ ಪಿಕೆ ಫಲಕ ಅಳವಡಿಸಬೇಕೆಂದು ಈ ಹಿಂದೆ ಹಲವು ಬಾರಿ ಸೂಚನೆ ನೀಡಲಾಗಿತ್ತು. ಇದನ್ನು ಉಲ್ಲಂಘಿಸಿ ಹಲವರು ಪಟ್ಟಣದಲ್ಲಿ ಆಟೋ ಚಾಲನೆ ಮಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಅಂತಹ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಂಡರು.

‘ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸುವುದು, ಪಟ್ಟಣ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಿ ಸಂಚಾರಿ ವಾಹನಗಳಿಗೆ, ಜನಸಾಮಾನ್ಯರಿಗೆ ಅಡ್ಡಿಪಡಿಸುವುದು, ಅಪ್ರಾಪ್ತ ಯುವಕರು ವಾಹನ ಚಾಲನೆ ಮಾಡುವುದು, ಅನಧಿಕೃತವಾಗಿ ಆಟೋ ಬಾಡಿಗೆ ಚಲಾಯಿಸುವುದು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT