ಗುರುವಾರ , ಮೇ 13, 2021
24 °C

ವಿರಾಜಪೇಟೆ ಪ.ಪಂ. ಉಪಾಧ್ಯಕ್ಷ ಹರ್ಷವರ್ಧನ್‌ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿರಾಜಪೇಟೆ: ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷ ಕೆ.ಬಿ. ಹರ್ಷವರ್ಧನ್ (45) ತೀವ್ರ ಹೃದಯಾಘಾತದಿಂದ ಭಾನುವಾರ ಮಧ್ಯರಾತ್ರಿ ನಿಧನರಾದರು.

ಪಟ್ಟಣದ ಮೀನುಪೇಟೆಯ ಮನೆಯಲ್ಲಿ ವಾಸವಿದ್ದ ಕೆ.ಬಿ. ಹರ್ಷವರ್ಧನ್ ಅವರಿಗೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.

ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಮೀನುಪೇಟೆಯಲ್ಲಿರುವ ತೋಟದಲ್ಲಿ ಸೋಮವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.

13ನೇ ವಾರ್ಡ್‌ನಲ್ಲಿ ಬಿಜೆಪಿಯಿಂದ ಕೆ.ಬಿ. ಹರ್ಷವರ್ಧನ್ ಆಯ್ಕೆಯಾಗಿದ್ದರು. ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ಪಟ್ಟಣದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸಂತಾಪ ಸೂಚಿಸಲಾಯಿತು.

ಶಾಸಕ ಕೆ.ಜಿ ಬೋಪಯ್ಯ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಬಿನ್ ದೇವಯ್ಯ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶ್ಮೀತಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುನೀತಾ, ಮುಖ್ಯಾಧಿಕಾರಿ ಎ.ಎಂ ಶ್ರೀಧರ್, ಎಂಜಿನಿಯರ್ ಹೇಮಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯರು ಅಂತಿಮ ನಮನ ಸಲ್ಲಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು