ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಜ್ಞಾನ ವಾಹಿನಿ’ ಮತ್ತೆ ಕಾರ್ಯಾರಂಭ

ಸಂಚಾರಿ ವಿಜ್ಞಾನ ಪ್ರಯೋಗಾಲಯಕ್ಕೆ ಚಾಲನೆ ನೀಡಿದ ಪ್ರಸಾದ್‌ಗೌಡ
Last Updated 15 ನವೆಂಬರ್ 2022, 4:58 IST
ಅಕ್ಷರ ಗಾತ್ರ

ಮಡಿಕೇರಿ: ಕೋವಿಡ್ ಕಾರಣಕ್ಕೆ ಸ್ಥಗಿತಗೊಂಡಿದ್ದ ‘ವಿಜ್ಞಾನ ವಾಹಿನಿ’ ಸಂಚಾರಿ ಪ್ರಯೋಗಾಲಯ ಮತ್ತೆ ಆರಂಭಗೊಂಡಿದೆ.

ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್‌ನ ಕೊಡಗು ಶಾಖೆ, ರೋಟರಿ ಮಿಸ್ಟಿ ಹಿಲ್ಸ್, ಆಶಾ ಫಾರ್ ಎಜುಕೇಶನ್ ಯು.ಎಸ್.ಎ. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಸೋಮವಾರ ಚಾಲನೆ ದೊರೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್‌ ಅಧ್ಯಕ್ಷ ಪ್ರಸಾದ್‌ಗೌಡ, ‘ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದ ವಿಷಯವನ್ನು ಪ್ರಾಯೋಗಿಕವಾಗಿ ಪಾಠ ಮಾಡುವ ಮೂಲಕ ಕಲಿಕೆಯಲ್ಲಿ ಉತ್ತಮ ಯಶಸ್ಸನ್ನು ಸಾಧಿಸಲು ಸಹಕಾರಿಯಾಗಲಿದೆ’ ಎಂದರು.

ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಜಿ.ಎಸ್. ಕುಮಾರ್ ಮಾತನಾಡಿ, ‘ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಅನುಕೂಲತೆಗಳನ್ನು ಮನಗಂಡು ಅವರಿಗೆ ಅನುಕೂಲವಾಗುವಂತೆ ವಿಜ್ಞಾನದ ವಿಷಯವನ್ನು ಪ್ರಾಯೋಗಿಕ ವಾಗಿ ಮಾಡುವುದರಿಂದ ವಿದಾರ್ಥಿಗಳ ಕಲಿಕಾ ಗುಣಮಟ್ಟವು ಹೆಚ್ಚುವುದರ ಮೂಲಕ ಕಲಿಕಾ ಆಸಕ್ತಿಯೂ ಹೆಚ್ಚಾಗುತ್ತದೆ’ ಎಂದರು.

ಮುಖ್ಯ ಅತಿಥಿಯಾಗಿದ್ದ ಶಾಲಾ ವಿದ್ಯಾರ್ಥಿನಿ ಬಿ.ಬಿ.ನಂದಿನಿ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ವಿಷಯದ ಕುರಿತು ಪ್ರಾಯೋ ಗಿಕವಾಗಿ ಕಲಿಯಲು ನಮಗೆ ಪ್ರಯೋಗಾ ಲಯದ ಕೊರತೆಯಿದ್ದು ಇದೀಗ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಮತ್ತು ರೋಟರಿ ಮಿಸ್ಟಿ ಹಿಲ್ಸ್‌ನ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸಂಚಾರಿ ವಿಜ್ಞಾನ ಪ್ರಯೋ ಗಾಲಯವನ್ನು ಆರಂಭಿಸಿದ್ದು ನಮಗೆ ಸಂತಸ ತಂದಿದೆ’ ಎಂದು ಹೇಳಿದಳು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಯೋಜನಾ ಉಪ ಸಮನ್ವಯಾಧಿಕಾರಿ ಕೃಷ್ಣಪ್ಪ, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್‍ನ ಖಜಾಂಚಿ ಡಾ. ಕೆ.ಎನ್.ಚಂದ್ರಶೇಖರ್, ಮಡಿಕೇರಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ಪದವಿಪೂರ್ವ ಕಾಲೇಜು - ಪ್ರೌಢಶಾಲೆ ವಿಭಾಗದ ಹಿರಿಯ ಶಿಕ್ಷಕಿ ಸೌಮ್ಯಲತಾ, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್‍ನ ಶಿಕ್ಷಣ ವಿಭಾಗದ ಮುಖ್ಯಸ್ಥ ಎಸ್.ಪ್ರವೀಣ್ ಕುಮಾರ್, ರೋಟರಿ ಜೋನ್ 6 ಜಿಲ್ಲೆ 3181 ನ ಸಹಾಯಕ ಗವರ್ನರ್ ರತನ್ ತಮ್ಮಯ್ಯ, ರೋಟರಿ ಜೋನ್ 6 ಜಿಲ್ಲೆ 3181 ನ ವಲಯ ಸೇನಾನಿ ಎನ್.ಡಿ ಅಚ್ಚಯ್ಯ, ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗದ ಅಧ್ಯಕ್ಷ ಚಂದ್ರಶೇಖರ್, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಸಂಸ್ಥೆಯ ಅಂಕಾಚಾರಿ, ಅವಿತ್ ಆನಂದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT