ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆ: ಪರೀಕ್ಷೆ ಬರೆಯಲಿದ್ದಾರೆ 2,772 ಮಂದಿ

Published : 28 ಸೆಪ್ಟೆಂಬರ್ 2024, 7:03 IST
Last Updated : 28 ಸೆಪ್ಟೆಂಬರ್ 2024, 7:03 IST
ಫಾಲೋ ಮಾಡಿ
Comments

ಮಡಿಕೇರಿ: ಜಿಲ್ಲೆಯಲ್ಲಿ ಸೆ. 29ರಂದು ನಡೆಯುವ ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಯ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಕಡ್ಡಾಯ ಕನ್ನಡ) ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಸ್ಪರ್ಧಾತ್ಮಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸುವಂತೆ ನಿರ್ದೇಶನ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳಾ ಮಾತನಾಡಿ, ಜಿಲ್ಲೆಯಲ್ಲಿ ಮಡಿಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜು, ಸಂತ ಮೈಕಲರ ಪದವಿಪೂರ್ವ ಕಾಲೇಜು, ಸಂತ ಜೋಸೆಫರ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಹಾಗೆಯೇ ಕುಶಾಲನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಈ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 2,772 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಮದೆ ಮಹೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಘವ, ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT