ಮರೂರು ಗ್ರಾಮ ಮತ್ತು ಹೆದ್ದಾರಿಯ ಮುಖ್ಯ ರಸ್ತೆಯ ಸಂಪರ್ಕ ರಸ್ತೆಯಾಗಿರುವ ಹಿನ್ನೆಲೆಯಲ್ಲಿ ದುರಸ್ತಿಗೆ ಅನೇಕ ಬಾರಿ ಗ್ರಾಮ ಪಂಚಾಯಿತಿ ಮತ್ತು ಸಂಬಂಧಿಸಿದ ಇಲಾಖೆಯವರಿಗೆ ಪತ್ರವ್ಯವಹಾರ ಮಾಡಿದರೂ ಇದುವರೆಗೂ ಯಾವುದೇ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಇದೀಗ ಅತಿಯಾದ ಮಳೆಯಿಂದಾಗಿ ರಸ್ತೆಯು ತೀರಾ ಕೆಸರು ಮಯವಾಗಿ ತಿರುಗಾಡಲು ತೊಂದರೆಯಾಗುತ್ತಿದ್ದು ಸಂಬಂಧಿಸಿದವರು ತುರ್ತಾಗಿ ಕ್ರಮ ವಹಿಸುವಂತೆ ಗ್ರಾಮಸ್ಥರಾದ ಚೆಲುವರಾಜ್, ರಮೇಶ್, ಲೋಕೇಶ್, ದಿನೇಶ್, ಮಂಜುನಾಥ್, ರಾಮಸ್ವಾಮಿ ಒತ್ತಾಯಿಸಿದ್ದಾರೆ.