ನಾಪೋಕ್ಲು: ದೊಡ್ಡಪುಲಿಕೋಟು ಗ್ರಾಮ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಮಡಿಕೇರಿಗೆ ತೆರಳಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ರೆಸಾರ್ಟ್ಗೆ ಅನುಮತಿ ನೀಡಬಾರದು ಎಂದು ಅಧಿಕಾರಿಗಳನ್ನು ಒತ್ತಾಯಿಸಿದರು.

ರೆಸಾರ್ಟಿನ ವಿಚಾರವಾಗಿ ಗ್ರಾಮಸ್ಥರು ಮಡಿಕೇರಿಗೆ ತೆರಳಿ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಇದುವರೆಗೂ ಸಲ್ಲಿಸಿದ ಅರ್ಜಿಯ ಸ್ಥಿತಿಗತಿಯ ವಿವರವನ್ನು ಪಡೆದರು ಹಾಗೂ ಗ್ರಾಮದಲ್ಲಿ ರೆಸಾರ್ಟ್ಗೆ ಯಾವುದೇ ರೀತಿಯ ಅನುಮತಿಯನ್ನು ನೀಡಬಾರದು ಎಂದು ಮನವಿಯನ್ನು ಮಾಡಿದರು.

ಸಮಿತಿಯ ಸಂಚಾಲಕ ಕರವಂಡ ಲವ ನಾಣಯ್ಯ ಮಾತನಾಡಿ, ‘ರೆಸಾರ್ಟ್ ನಿರ್ಮಾಣದಿಂದ ಗ್ರಾಮದಲ್ಲಿ ಸಮಸ್ಯೆಗಳು ಉದ್ಭವಿಸುತ್ತವೆ. ಸ್ವಚ್ಛ ಪರಿಸರಕ್ಕೆ ಧಕ್ಕೆಯಾಗುತ್ತದೆ. ಈ ರೀತಿಯ ಸಮಸ್ಯೆಗಳು ಆಗದಂತೆ ಗ್ರಾಮ ಸಭೆಯಲ್ಲಿ ಪಂಚಾಯಿತಿಯ ಮೂಲಕ ಗ್ರಾಮಸ್ಥರೆಲ್ಲರೂ ಸೇರಿ ರೆಸಾರ್ಟ್ ನಿರ್ಮಾಣಕ್ಕೆ ತಡೆಯೊಡ್ಡಲು ನಿರ್ಣಯ ಕೈಗೊಳ್ಳಲಾಗಿದೆ. ನಿರ್ಣಯ ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ತಹಶೀಲ್ದಾರ್ ಕಚೇರಿ, ಮಡಿಕೇರಿ ಗ್ರಾಮಾಂತರ ಅಭಿವೃದ್ಧಿ ಇಲಾಖೆ, ಪ್ರವಾಸೋದ್ಯಮ ಇಲಾಖೆಗೆ ಸಲ್ಲಿಸಲಾಗಿದೆ’ ಎಂದರು.

ಬಲ್ಲಮಾವಟಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚೋಕಿರ ಬಾಬಿ ಭೀಮಯ್ಯ, ಸದಸ್ಯರಾದ ಮುಕ್ಕಾಟಿರ ಸುತನ್ ಸುಬ್ಬಯ್ಯ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.