ಕುಶಾಲನಗರ: ತಾಲ್ಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಸೆ ಗ್ರಾಮದಲ್ಲಿ ಬೀದಿ ನಾಯಿಗಳ ಸಂರಕ್ಷಣೆ ಕೇಂದ್ರ ನಿರ್ಮಾಣಕ್ಕಾಗಿ ಕೈಗೊಂಡಿದ್ದ ಸಮತಟ್ಟು ಕಾರ್ಯಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ, ಭಾನುವಾರ ಪ್ರತಿಭಟನೆ ನಡೆಸಿದರು.

ಇಲ್ಲಿ ಬೀದಿ ನಾಯಿಗಳ ಸಂರಕ್ಷಣಾ ಕೇಂದ್ರಕ್ಕೆ ಕಂದಾಯ ಇಲಾಖೆಯಿಂದ ಸ್ಥಳ ಗುರುತಿಸಲಾಗಿದೆ. ಗ್ರಾಮಸ್ಥರ ವಿರೋಧದ ನಡುವೆಯೂ ಏಕಾಏಕಿ ಬೆಟ್ಟ ಅಗೆದು ನೆಲವನ್ನು ಸಮತಟ್ಟು ಮಾಡುವ ಕಾರ್ಯ ಕೈಗೊಳ್ಳಲಾಗಿತ್ತು. ಸ್ಥಳೀಯರು ಕಾಮಗಾರಿಗೆ ತಡೆಯೊಡ್ಡಿದರು. ಕಾಮಗಾರಿ ಪ್ರಾರಂಭಿವಾಗಿರುವ ವಿಚಾರ ತಿಳಿದು ಸ್ಥಳಕ್ಕೆ ಬಂದಿದ್ದ ಹಕ್ಕೆ, ಮರೂರು ಗ್ರಾಮಸ್ಥರು ಹಿಟಾಚಿ ಚಾಲನೆ ತಡೆದು ಕಾಮಗಾರಿ ನಿಲ್ಲಿಸಿದರು. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಆಗಮಿಸಿ ಪರಿಶೀಲಿಸಿದರು.

‘ಹುಲುಸೆಯಲ್ಲಿ ನಾಯಿಗಳ ಸಂರಕ್ಷಣೆ ಕೇಂದ್ರ ಸ್ಥಾಪಿಸಲು ಅರಣ್ಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನುಮತಿ ಪಡೆದಿಲ್ಲ. ಕಾಮಗಾರಿ ಕಾರಣ ಅಪಾರ ಪ್ರಮಾಣದಲ್ಲಿ ಮರಗಳ ಹನನ ನಡೆಯಲಿದೆ, ಪರಿಸರಕ್ಕೆ ಹಾನಿ ಉಂಟಾಗಲಿದೆ’ ಎಂದು ಗ್ರಾಮಸ್ಥರು ಆರೋಪಿಸಿದರು. ‘ಗ್ರಾಮ ಪಂಚಾಯಿತಿ, ತಾಲ್ಲೂಕು ಆಡಳಿತಕ್ಕೆ ಆಕ್ಷೇಪಣೆ ಸಲ್ಲಿಸಿದ್ದರೂ ಗುತ್ತಿಗೆದಾರರ ಮೂಲಕ ಏಕಏಕಿ ಕಾಮಗಾರಿ ಆರಂಭಿಸಲು ಮುಂದಾಗಿದ್ದಾರೆ. ಇಲ್ಲಿ ಬೀದಿ ನಾಯಿಗಳ ಸಂರಕ್ಷಣಾ ಕೇಂದ್ರ ಸ್ಥಾಪಿಸಬಾರದು. ತೀವ್ರಾ ರಟ ಹಮ್ಮಿಕೊಳ್ಳಲಾಗುವುದು’ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ಹೆಬ್ಬಾಲೆ ಗ್ರಾಮ ಪಂಚಾಯಿತಿ ಸದಸ್ಯೆ ಪುಟ್ಟಲಕ್ಷ್ಮಿ, ಸಾಮಾಜಿಕ ಹೋರಾಟಗಾರ ಮೋಹನ್, ಗ್ರಾಮಸ್ಥರಾದ ಮೂರ್ತಿ,ಶಿವಣ್ಣ, ಚಂದ್ರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.