ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಇಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.

ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಬರೆದಿಟ್ಟಿರುವ ಮರಣಪತ್ರವನ್ನು ಗಂಭೀರವಾಗಿ ಪರಿಗಣಿಸಬೇಕು. ಅದರಲ್ಲಿ ಉಲ್ಲೇಖವಾಗಿರುವ ಎಲ್ಲರ ವಿರುದ್ದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ಅವರು ಕಾಂಗ್ರೆಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇದರಿಂದ ಸಂಚಾರದಟ್ಟಣೆ ಉಂಟಾಯಿತು. ಸ್ಥಳಕ್ಕೆ ಬಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಆತ್ಮಹತ್ಯೆ ಬೆಂಗಳೂರಿನಲ್ಲಿಯಾಗಿದ್ದು ಅಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲಿನ ಪೊಲೀಸರಿಗೆ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ಮುಖಂಡರಾದ ಕೆ.ಜಿ.ಬೋಪಯ್ಯ, ಮಹೇಶ್ ಜೈನಿ ಭಾಗವಹಿಸಿದ್ದರು
.ವಿನಯ್ ಸೋಮಯ್ಯ ಆತ್ಮಹತ್ಯೆ: ಪೊನ್ನಣ್ಣ, ಮಂಥರ್ಗೌಡ, ತನ್ನೀರಾ ಮೈನಾ ವಿರುದ್ಧ ದೂರು.ಮರಣಪತ್ರ ಬರೆದಿಟ್ಟು ಕೊಡಗು ಮೂಲದ ವ್ಯಕ್ತಿ ಬೆಂಗಳೂರಿನಲ್ಲಿ ಆತ್ಮಹತ್ಯೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.