ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಮುಸೌಹಾರ್ದ ಕದಡುವ ಸಂದೇಶ ಪೋಸ್ಟ್; ವ್ಯಕ್ತಿ ಉತ್ತರಪ್ರದೇಶದಲ್ಲಿ ಬಂಧನ

ನೀತಿ ಸಂಹಿತೆ ಉಲ್ಲಂಘನೆ; ಇಬ್ಬರ ವಿರುದ್ಧ ಕಾನೂನು ಕ್ರಮ
Published 21 ಮಾರ್ಚ್ 2024, 15:40 IST
Last Updated 21 ಮಾರ್ಚ್ 2024, 15:40 IST
ಅಕ್ಷರ ಗಾತ್ರ

ಮಡಿಕೇರಿ:  ಟ್ವಿಟರ್ ಖಾತೆಯಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಸುಳ್ಳು ಸುದ್ದಿಯ ಪೋಸ್ಟ್‌ ಮಾಡಿದ ಆರೋ‍ಪದ ಮೇರೆಗೆ ಇಲ್ಲಿನ ಶನಿವಾರಸಂತೆ ಠಾಣೆ ಪೊಲೀಸರು ಉತ್ತರಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖತೋಲಿಯಾದಲ್ಲಿ ವಾಸವಿದ್ದ ಸುಧಾಕರರಾವ್ (55) ಎಂಬಾತನನ್ನು ಬಂಧಿಸಿದ್ದಾರೆ.

ಈತ ಮಾರ್ಚ್ 3ರಂದು ತನ್ನ ಟ್ವಿಟರ್ ಖಾತೆಯಲ್ಲಿ ಕೋಮುಸೌಹಾರ್ದತಕ್ಕೆ ಧಕ್ಕೆ ತರುವಂತಹ ಸುಳ್ಳುಸುದ್ದಿ ಹಾಕಿದ್ದ. ಈತನ ವಿರುದ್ಧಪ್ರಕರಣ ದಾಖಲಿಸಿದ ಶನಿವಾರಸಂತೆ ಠಾಣೆ ಪೊಲೀಸರು ಉತ್ತರ ಪ್ರದೇಶಕ್ಕೆ ತೆರಳಿ ಬಂಧಿಸಿ ಕರೆತಂದಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ; ಇಬ್ಬರ ವಿರುದ್ಧ ಪ್ರಕರಣ

ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಕಾಂಗ್ರೆಸ್ ವಿರುದ್ಧ ಸುಳ್ಳು ಸುದ್ದಿ ಪೋಸ್ಟ್ ಮಾಡಿರುವ ಆರೋಪದ ಮೇರೆಗೆ ವಿರಾಜಪೇಟೆಯ ಕಾರ್ಮಾಡು ಗ್ರಾಮದ ಯಮುನಾ ಚೆಂಗಪ್ಪ ಎಂಬುವವರ ವಿರುದ್ಧ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಪ್ರಧಾನಮಂತ್ರಿಯವರ ಭಾವಚಿತ್ರವನ್ನು ಅಸಂಬದ್ಧವಾಗಿ ಹಾಗೂ ಅವಹೇಳನಕಾರಿಯಾಗಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಆರೋಪದ ಮೇರೆಗೆ ಮಡಿಕೇರಿ ನಿವಾಸಿ ಐ.ಜಿ.ಚಿಣ್ಣಪ್ಪ ವಿರುದ್ಧ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಸಿಆರ್‌ಪಿಸಿ 107ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡದಂತೆ ಇಬ್ಬರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದ ಪೊಲೀಸರು

ಧರ್ಮ, ಧರ್ಮಗಳ ನಡುವೆ ಕೋಮುಸೌಹಾರ್ದ ಕದಡುವ ದುರುದ್ದೇಶದಿಂದ ಪ್ರಚೋದನಾಕಾರಿ ಪದಗಳನ್ನು ಬಳಸಿ ಯಾವುದೇ ಜಾತಿ, ಪಕ್ಷ, ವ್ಯಕ್ತಿಗಳ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಭಾವಚಿತ್ರ, ಸಂದೇಶ ಹಾಗೂ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು.

ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ವಹಿಸಿದ್ದು, ಸುಳ್ಳು ಸುದ್ದಿಗಳ ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT