ವಿರಾಜಪೇಟೆ (ಕೊಡಗು): ಸಮೀಪದ ಕೊಳ್ತೋಡು-ಬೈಗೋಡು ಗ್ರಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ದಾಳಿಯಿಂದ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ಗ್ರಾಮದ ಸಿ. ಸೋಮಣ್ಣ ಅವರ ಕಾಫಿ ತೋಟದ ಲೈನ್ಮನೆಯಲ್ಲಿ ವಾಸವಿದ್ದ ಪಣಿ ಯರವರ ಮಾದ (48) ಮೃತಪಟ್ಟ ಕಾರ್ಮಿಕ.

ಅಗತ್ಯವಸ್ತು ಖರೀದಿಸಿ ಮನೆಗೆ ವಾಪಸ್ಸಾಗುವ ವೇಳೆ ಕಾಡಾನೆ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಭಾನುವಾರ ಮೃತಪಟ್ಟಿದ್ದಾರೆ.

ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ರೋಶಿನಿ, ಅರಣ್ಯಾಧಿಕಾರಿ ದಿಲೀಪ್ ಕುಮಾರ್, ಮನೋಜ್ ಕ್ರಿಸ್ಟೋಫರ್, ಉಮಾ ಶಂಕರ್, ಶ್ರೀನಿವಾಸ್, ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್ಐ ವೀಣಾ ನಾಯಕ್ ಭೇಟಿ ನೀಡಿ ಪರಿಶೀಲಿಸಿದರು.

ವಿರಾಜಪೇಟೆಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.