ವಿರಾಜಪೇಟೆ: ಪೆಟ್ರೋಲ್, ಡೀಸೆಲ್, ಸಿಎನ್ಜಿ ಹಾಗೂ ಆಯಿಲ್ ದರ ಏರಿಕೆಯಾಗಿರುವ ಕಾರಣ ಆಟೊ ಪ್ರಯಾಣ ದರ ಏರಿಕೆ ಮಾಡುವುದು ಅನಿವಾರ್ಯ. ಕೂಡಲೆ ಜಿಲ್ಲಾ ಸಂಘ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ದರ ಏರಿಕೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಜೈ ಭಾರತ್ ಆಟೊ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎನ್.ಎನ್. ಶಿವು ಒತ್ತಾಯಿಸಿದ್ದಾರೆ.

ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊತೈಲ ಬೆಲೆ ಕಳೆದ ಒಂದು ತಿಂಗಳಲ್ಲಿ ಪ್ರತಿ ಲೀಟರ್ಗೆ ₹7 ಏರಿಕೆ ಕಂಡಿದೆ. ಜೊತೆಗೆ ಆಟೊಗಳ ಬಿಡಿಭಾಗಗಳ ದರ ಹೆಚ್ಚಾಗಿದೆ. . ಕನಿಷ್ಠ ಪ್ರಯಾಣ ದರ ₹ 40 ಇದ್ದು, ತೈಲ ಬೆಲೆ ಏರಿಕೆಯಾದ ಕಾರಣ ಕೆಲವು ಆಟೊ ಚಾಲಕರು ₹ 50 ಪಡೆದುಕೊಳ್ಳುತ್ತಿದ್ದಾರೆ. ಇದರಿಂದ ಸಾರ್ವಜನಿಕರು ಮತ್ತು ಆಟೊ ಚಾಲಕರ ಮಧ್ಯೆ ವಾಗ್ವಾದ ನಡೆಯುತ್ತಿವೆ ಎಂದರು.

ಸಂಘದ ಸದಸ್ಯ ವಸಂತ್ ಮಾತನಾಡಿ, ಆಟೊಗಳಿಗೆ ಕೇವಲ 15 ಕಿ.ಮೀ ಪರಿಮಿತಿ ನೀಡಲಾಗಿದೆ. ಜಿಲ್ಲೆಯಲ್ಲಿ ವಿರಾಜಪೇಟೆ ಮತ್ತು ಕುಶಾಲನಗರದಲ್ಲಿ ಮಾತ್ರ ಸಿಎನ್ಜಿ ಬಂಕ್ಗಳಿವೆ. ದೂರದ ಊರಿನಿಂದ ಬಂದು ಗ್ಯಾಸ್ ತುಂಬಿಸಿಕೊಂಡು ಹೋಗುವಾಗ ಅಪಘಾತ ಸಂಘವಿಸಿದರೆ ಯಾವುದೇ ವಿಮಾ ಸೌಲಭ್ಯಗಳು ಲಭಿಸುವುದಿಲ್ಲ. ಹಾಗಾಗಿ, ಆಟೊಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಮುಕ್ತ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಸದಸ್ಯ ಸುರೇಶ್ ಕುಮಾರ್ ಮಾತನಾಡಿ, ಪಟ್ಟಣದಲ್ಲಿನ ಬಹುತೇಕ ರಸ್ತೆಗಳು ಗುಂಡಿ ಬಿದ್ದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಕೂಡಲೇ ರಸ್ತೆ ವಿಸ್ತರಣೆಯ ಕಾರ್ಯ ನಡೆಸುವಂತೆ ಆಗ್ರಹಿಸಿದರು.

ಅರುಣ್ ಬಿ.ಎಸ್, ಕಿರಣ್, ರೋಷನ್ ಎಸ್, ಶುಭಕರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-552109768

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.