ಗೋಣಿಕೊಪ್ಪಲು: ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ದೊಡ್ಡ ಕ್ಷೇತ್ರವಾಗಿದ್ದು, ನಾಣಚ್ಚಿಯಿಂದ ಕರಿಕೆವರೆಗೆ 150 ಕಿಲೋ ಮೀಟರ್ ವಿಸ್ತೀರ್ಣ ಹೊಂದಿದೆ. ಕ್ಷೇತ್ರದ ಎಲ್ಲ ಕಡೆಗಳಲ್ಲಿಯೂ ವಿವಿಧ ಅಭಿವೃದ್ಧಿ ಕಾಮಗಾರಿಗಳು ಭರದಿಂದ ನೆಡೆಯುತ್ತಿವೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ, ನಾಲ್ಕೇರಿ ರಸ್ತೆಯ ಲಕ್ಷ್ಮಣತೀರ್ಥ ನದಿ ಸಮೀಪ 2 ಕಿ.ಮೀ. ದೂರದ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಆಗಬೇಕಾದ ಕೆಲಸಗಳೂ ಇನ್ನೂ ಬಹಳಷ್ಟಿದೆ. ಇದೀಗ ಕಾಂಕ್ರಿಟ್ ರಸ್ತೆಯನ್ನು ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಎಲ್ಲರ ಸಹಕಾರ ಅಗತ್ಯ ಎಂದರು.

‘ಕಳೆದ 20 ವರ್ಷಗಳಿಂದ ಬಹಳಷ್ಟು ಕೆಲಸಗಳೂ ನಡೆದಿದ್ದುದರಿಂದ ಈಗ ಅಭಿವೃದ್ಧಿ ಕಾರ್ಯಗಳ ಬಗ್ಗೆ ಒತ್ತಡ ಹೆಚ್ಚಿದೆ. ನಾನು ರಾಜಕೀಯವಾಗಿ ದೂರುವುದಿಲ್ಲ. ಆದರೆ, ಜನರು ನನಗೆ ಅಧಿಕಾರ ನೀಡಿ ಮೂರು ವರ್ಷ ಆಗಿದೆ. ಇನ್ನಷ್ಟು ಕೆಲಸ ಆಗಬೇಕಿದೆ. ಎಲ್ಲರ ಪ್ರೀತಿ ವಿಶ್ವಾಸದಿಂದ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

ಪೊನ್ನಂಪೇಟೆ ಕೊಡವ ಸಮಾಜದ ಮಾಜಿ ಅಧ್ಯಕ್ಷ ಸುಳ್ಳಿಮಾಡ ಗೋಪಾಲ್ ತಿಮ್ಮಯ್ಯ, ಮಾಚಿಮಾಡ ಮನು, ಮಲ್ಲಪನೆರ ಸುಧೀರ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ನಾಲ್ಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ತೀತಿರ ಕಟ್ಟಿ ಕಾರ್ಯಪ್ಪ, ಕೆ.ಬಾಡಗ ವಲಯ ಅಧ್ಯಕ್ಷ ಚಿಮ್ಮಣಮಾಡ ರವಿ ನರೇಂದ್ರ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-51-2050095142

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.