ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಜಪೇಟೆ | ಕಾರ್ಮಿಕರ ಒಗ್ಗಟ್ಟೇ ಹೋರಾಟದ ಶಕ್ತಿ

ವಿರಾಜಪೇಟೆಯಲ್ಲಿ ಸಿಐಟಿಯು ಪ್ರಮುಖ ದುರ್ಗಾ ಪ್ರಸಾದ್
Published 2 ಮೇ 2024, 16:17 IST
Last Updated 2 ಮೇ 2024, 16:17 IST
ಅಕ್ಷರ ಗಾತ್ರ

ವಿರಾಜಪೇಟೆ: ಕಾರ್ಮಿಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಸಂಘಟನೆ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಿಐಟಿಯು ಕಾರ್ಮಿಕ ಸಂಘಟನೆಯ ಮುಖಂಡ ಐ.ಆರ್.ದುರ್ಗಾ ಪ್ರಸಾದ್ ಹೇಳಿದರು.

ಕಾರ್ಮಿಕರ ದಿನಾಚರಣೆ ಅಂಗವಾಗಿ ಸಿಐಟಿಯು ಜಿಲ್ಲಾ ಸಮಿತಿ  ಪಟ್ಟಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಘಟನೆಗಳ ಮೂಲಕ ಒಗ್ಗಟ್ಟಿನಿಂದ ಹೋರಾಟಗಳು ನಡೆದಾಗ ಮಾತ್ರ ಅದಕ್ಕೆ ಶಕ್ತಿ ನೀಡಿದಂತಾಗುತ್ತದೆ. ಆಗ ಮಾತ್ರ ಸರ್ಕಾರ ಮತ್ತು ನಾಯಕರು ಸ್ಪಂದಿಸುತ್ತಾರೆ. ಒಗ್ಗಟ್ಟಿನಿಂದ ಎಲ್ಲವನ್ನು ಬಗೆಹರಿಸಿಕೊಳ್ಳಲು ಸಾಧ್ಯ. ಕಾರ್ಮಿಕರು ಸಂಘಟನೆ ಮೂಲಕ ತಮ್ಮ ಬೇಡಿಕೆ ಈಡೇರಿಸಲು ಸಾಧ್ಯವಾಗುತ್ತದೆ ಎಂದರು.

ಸಿಐಟಿಯು  ಜಿಲ್ಲಾ ಅಧ್ಯಕ್ಷ ಪಿ.ಆರ್.ಭರತ್  ಅಧ್ಯಕ್ಷತೆ ವಹಿಸಿ ಮಾತನಾಡಿ,  ಮದ್ಯಪಾನದಿಂದ ಕಾರ್ಮಿಕರು ಜೀವನವನ್ನು ಹಾಳು ಮಾಡಿಕೊಳ್ಳಬಾರದು. ದುಷ್ಚಟ ಬಿಟ್ಟು ಪ್ರತಿಯೊಬ್ಬರೂ ಉತ್ತಮ ಜೀವನ ನಡೆಸಬೇಕು. ಕಾರ್ಮಿಕರ ಮಕ್ಕಳೂ ಕಾರ್ಮಿಕರಾಗಿ ಉಳಿಯದೆ, ಉತ್ತಮ ಶಿಕ್ಷಣ ಪಡೆದು ಉನ್ನತ ಉದ್ಯೋಗವನ್ನು ಪಡೆದುಕೊಳ್ಳಬೇಕು. ದಿನನಿತ್ಯದ ಸಾಮಗ್ರಿಗಳ ಬೆಲೆ ಏರಿಕೆಯಿಂದ ಬಡ ಕಾರ್ಮಿಕರ ಕುಟುಂಬಗಳು ಸಂಕಷ್ಟವನ್ನು ಎದುರಿಸುವಂತಾಗಿದೆ ಎಂದು ತಿಳಿಸಿದರು.

ಸಿಐಟಿಯು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎ.ಸಿ.ಸಾಬು   ಮಾತನಾಡಿ, ಮಹಿಳೆಯರ ಮೇಲಿನ ಶೋಷಣೆ ನಿಂತಿಲ್ಲ. ಬಿಸಿಯೂಟ ಯೋಜನೆ ನೌಕರರು, ಕಟ್ಟಡ ಕಾರ್ಮಿಕರು, ಹಮಾಲಿ ಕಾರ್ಮಿಕರು ಸೇರಿದಂತೆ ಉಳಿದ ಎಲ್ಲಾ ಕಾರ್ಮಿಕರು ಸಂಘಟನೆಯ ಸದಸ್ಯತ್ವ ಪಡೆಯಬೇಕು ಎಂದರು.

ಸಂಘಟನೆಯ ಜಿಲ್ಲಾ ಖಜಾಂಚಿ ಎನ್.ಡಿ.ಕುಟ್ಟಪ್ಪ ಅವರು ಮಾತನಾಡಿದರು. ವೇದಿಕೆಯಲ್ಲಿ ಸಿಐಟಿಯು ಜಿಲ್ಲಾ ಸಮಿತಿಯ ಸಂಚಾಲಕಿ ಪದ್ಮಿನಿ, ಹರಿದಾಸ್, ರಾಚಪ್ಪಜಿ ಹಾಗೂ ಶಾಜಿ ರಮೇಶ್ ಉಪಸ್ಥಿತರಿದ್ದರು. ಕಾರ್ಮಿಕರು ಸಭೆಯಲ್ಲಿ ಭಾಗವಹಿಸಿದ್ದರು.

ವಿರಾಜಪೇಟೆಯ ಪುರಭವನದಲ್ಲಿ ಬುಧವಾರ ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಸಿಐಟಿಯು ಸಂಘಟನೆಯ ವತಿಯಿಂದ ನಡೆದ ಸಭೆಯಲ್ಲಿ ಸಂಘಟನೆಯ ಪ್ರಮುಖರಾದ ಡಾ. ಐ.ಆರ್.ದುರ್ಗಾ ಪ್ರಸಾದ್ ಅವರು ಮಾತನಾಡಿದರು.
ವಿರಾಜಪೇಟೆಯ ಪುರಭವನದಲ್ಲಿ ಬುಧವಾರ ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಸಿಐಟಿಯು ಸಂಘಟನೆಯ ವತಿಯಿಂದ ನಡೆದ ಸಭೆಯಲ್ಲಿ ಸಂಘಟನೆಯ ಪ್ರಮುಖರಾದ ಡಾ. ಐ.ಆರ್.ದುರ್ಗಾ ಪ್ರಸಾದ್ ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT