ವಿರಾಜಪೇಟೆ: ಪ್ರತಿ ಬಾರಿ ಸಚಿವ ಸಂಪುಟ ರಚನೆಯ ಸಂದರ್ಭ ಕೊಡಗು ಜಿಲ್ಲೆ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದೆ. ಈ ಬಾರಿ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಒತ್ತಾಯಿಸಿದರು.

ಪಟ್ಟಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2012ರಿಂದ ಸಚಿವ ಸಂಪುಟದಲ್ಲಿ ಕೊಡಗು ಜಿಲ್ಲೆಗೆ ಯಾವುದೇ ಪ್ರಾತಿನಿಧ್ಯ ನೀಡಿಲ್ಲ. ಪ್ರತಿ ವರ್ಷ ಜಿಲ್ಲೆಯು ಅತಿವೃಷ್ಟಿ ಅಥವಾ ಅನಾವೃಷ್ಟಿಗೆ ಒಳಗಾಗುತ್ತಿದೆ. ಅತಿ ಹೆಚ್ಚು ಮಳೆ ಬೀಳುವ ಜಿಲ್ಲೆಯ ಕಾವೇರಿ ನದಿಯ ನೀರನ್ನು ಹೊರ ಜಿಲ್ಲೆ, ರಾಜ್ಯಗಳಿಗೆ ನೀಡುತ್ತಿದ್ದು, ಅದರಿಂದ ಜಿಲ್ಲೆಗೆ ಏನು ಪ್ರಯೋಜನವು ಇಲ್ಲ. ಆದರೆ, ಪ್ರವಾಹದಿಂದ ಇಲ್ಲಿನ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಸಾರ್ವಜನಿಕ ಸೇವೆಗೆ ಸದಾ ತನ್ನನ್ನು ತೊಡಗಿಸಿಕೊಂಡಿರುವ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದರೆ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಿದಂತಾಗುತ್ತದೆ ಎಂದರು.

ಸಂಘದ ಉಪಾಧ್ಯಕ್ಷ ಚಂದ್ರಶೇಖರ್ ರಾಜ, ಕಾರ್ಯದರ್ಶಿ ಪುಗ್ಗೆರ ನಂದಾ, ಖಜಾಂಚಿ ತೋರೆರ ಪೂವಯ್ಯ, ಮಾಜಿ ಸೈನಿಕರ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಬಾಳೆಕುಟ್ಟಿರ ದಿನಿ ಬೋಪಯ್ಯ, ನಿರ್ದೇಶಕರಾದ ಚೇಂದ್ರಿಮಾಡ ನಂಜಪ್ಪ, ಪಟ್ರಪಂಡ ಕರುಂಬಯ್ಯ, ಎಂ.ಕೆ.ಸಲಾಂ ಕಡಂಗ, ಕಬ್ಬಚಿರ ಬೋಪಣ್ಣ, ಎಚ್.ಕೆ ಅಪ್ಪಯ್ಯ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-51-376697743

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.