ವಿರಾಜಪೇಟೆ: ತಾಲ್ಲೂಕಿನ ಕಣ್ಣಂಗಾಲ ಒಕ್ಕಲಿಗರ ಸಂಘದಿಂದ ಒಕ್ಕಲಿಗ ಸಮುದಾಯ ಬಾಂಧವರಿಗಾಗಿ ವಿವಿಧ ಕ್ರೀಡಾಕೂಟಗಳು ಏ.19ರಂದು ನಡೆಯಲಿದೆ.

ಸಮೀಪದ ಅಮ್ಮತ್ತಿ ಒಂಟಿಯಂಗಡಿ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಬೆಳಿಗ್ಗೆ 10ಕ್ಕೆ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಎಸ್ ಗೋಪಾಲಕೃಷ್ಣ ವಹಿಸಲಿದ್ದಾರೆ. ಉದ್ಘಾಟಕರಾಗಿ ಕಣ್ಣಂಗಾಲಿನ ಹೊಳೆನರಸೀಪುರ ಸೆಸ್ಕ್ ಎಂಜಿನಿಯರ್ ಕೆ.ಕೆ ಮೋಹನ್ ಕುಮಾರ್ ಹಾಗೂ ವಿರಾಜಪೇಟೆ ತಾಲ್ಲೂಕು ಪಂಚಾಯತ್ ವ್ಯವಸ್ಥಾಪಕ ಕೆ.ಆರ್.ಸ್ವರೂಪ ಆಗಮಿಸಲಿದ್ದಾರೆ.

ಪುರುಷರಿಗೆ ವಾಲಿಬಾಲ್, ಬಾಂಬ್ ಇನ್ ದ ಸಿಟಿ, ಮಹಿಳೆಯರಿಗೆ ಥ್ರೋಬಾಲ್, ಬಾಂಬ್ ಇನ್ ದ ಸಿಟಿ, ಬಾಲಕ ಮತ್ತು ಬಾಲಕಿಯರಿಗೆ 4 ರಿಂದ 6ವರ್ಷದವರಿಗೆ 100 ಮೀ ಓಟ, 7 ರಿಂದ 12ವರ್ಷದವರಿಗೆ 100 ಮೀ ಓಟ ಮತ್ತು 1 ರಿಂದ 3 ವರ್ಷದವರೆಗಿನ ಮಕ್ಕಳಿಗೆ ಕಾಳು ಹೆಕ್ಕುವ ಸ್ಪರ್ಧೆ, 13ರಿಂದ 18 ವರ್ಷದ ಬಾಲಕ-ಬಾಲಕಿಯರಿಗೆ 100ಮೀ ಓಟದ ಸ್ಪರ್ಧೆ ನಡೆಯಲಿದೆ.

ಕಣ್ಣಂಗಾಲ ಒಕ್ಕಲಿಗರ ಸಂಘದ ವ್ಯಾಪ್ತಿಗೆ ಒಳಪಡುವ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತದೆ.

ಸಂಜೆ 5ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಎಸ್ ಗೋಪಾಲಕೃಷ್ಣ ವಹಿಸುವರು. ಅತಿಥಿಗಳಾಗಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಮೈಸೂರು ವಿಭಾಗದ ಪ್ರಾದೇಶಿಕ ಭೂ ದಾಖಲೆಗಳ ಜಂಟಿ ನಿರ್ದೇಶಕ ಈ.ಪ್ರಕಾಶ್ ಭಾಗವಹಿಸುವರು ಎಂದು ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-51-286158589

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.