ವಿರಾಜಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ತಾಲ್ಲೂಕು ಘಟಕದ ಸಭೆ ಪಟ್ಟಣದ ಶಿಕ್ಷಕರ ಭವನದಲ್ಲಿ ಈಚೆಗೆ ನಡೆಯಿತು.

ಶೌರ್ಯ ಕಾರ್ಯಕ್ರಮ ಯೋಜನಾಧಿಕಾರಿ ಶ್ರೀ ಜೈವಂತ್ ಪಟಗಾರ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯದಲ್ಲಿ ಕಳೆದ 6 ವರ್ಷಗಳಿಂದ ಶೌರ್ಯ ವಿಪತ್ತು ನಿರ್ವಹಣಾ ಘಟಕವು ಆರಂಭವಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಹ ಕೆಲಸವಾಗಿದೆ. ರಾಜ್ಯದ 89 ತಾಲ್ಲೂಕುಗಳನ್ನು ಅತಿಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದ್ದು, ಅವುಗಳಲ್ಲಿ ವಿರಾಜಪೇಟೆ ತಾಲ್ಲೂಕು ಕೂಡ ಒಂದಾಗಿದೆ. ಮುಂದಿನ ದಿನಗಳಲ್ಲಿ ಅನಿರೀಕ್ಷಿತ ವಿಪತ್ತುಗಳಿಗೆ ತಕ್ಷಣ ಸ್ಪಂದಿಸಲು ಸ್ವಯಂ ಸೇವಕರು ಸಜ್ಜಾಗಬೇಕು ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನಾಧಿಕಾರಿ ಹರೀಶ್, ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾತನಾಡಿದರು.

ತಾಲ್ಲೂಕಿನಲ್ಲಿ ನೂತನ 15 ಜನರ ತುರ್ತು ಸ್ಪಂದನ ಘಟಕವನ್ನು ಕಾರ್ಯಕ್ರಮದಲ್ಲಿ ರಚಿಸಿ, ಮಾಡಿ ಜವಾಬ್ದಾರಿ ಹಸ್ತಾಂತರಿಸಲಾಯಿತು. ಸಭೆಯಲ್ಲಿ ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ., ಆಡಳಿತ ಪ್ರಬಂಧಕರಾದ ಮಮತಾ, ವಲಯ ಮೇಲ್ವಿಚಾರಕರಾದ ಧನೇಶ್, ಪುಷ್ಪಲತಾ, ವಿರಾಜಪೇಟೆ ತಾಲ್ಲೂಕಿನ ಮೇಲ್ವಿಚಾರಕರು, ಸಂಯೋಜಕರು, ಘಟಕ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-51-1518955660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.