ವಿರಾಜಪೇಟೆ: ‘ಪಟ್ಟಣದಲ್ಲಿ ವಾಹನ ದಟ್ಟಣೆ ಹೆಚ್ಚಾಗುತಿದ್ದು, ಪ್ರಮುಖ ಬೀದಿಗಳಲ್ಲಿ ವಾಹನ ನಿಲುಗಡೆ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಸ್ಥಳೀಯ ಆಡಳಿತ ಗಮನಹರಿಸಬೇಕು’ ಎಂದು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಮಾದಪಂಡ ಕಾಶಿ ಕಾವೇರಪ್ಪ ಆಗ್ರಹಿಸಿದರು.

ಪಟ್ಟಣದಲ್ಲಿ ಶನಿವಾರ ಚೇಂಬರ್ ಆಫ್ ಕಾಮರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ವಾಹನ ದಟ್ಟಣೆಯನ್ನು ನಿಯಂತ್ರಿಸಲು ವರ್ತಕರಿಗೂ ಸಾರ್ವಜನಿಕರಿಗೂ ಅನುಕೂಲವಾಗುವಾಗುವಂತೆ ಬದಲಿ ವ್ಯವಸ್ಥೆ ಕಲ್ಪಿಸಬೇಕಿದೆ. ಕುಡಿಯುವ ನೀರಿನ ಯೋಜನೆಗೆಂದು ಅಗೆದಿರುವ ರಸ್ತೆಗಳನ್ನು ಕೂಡಲೇ ಸರಿಪಡಿಸಬೇಕು. ಫುಟ್ಪಾತ್, ಗಾಡಿ ವ್ಯಾಪಾರಿಗಳು ಹೆಚ್ಚಾಗಿದ್ದು, ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ.ಕೂಡಲೇ ತೆರವುಗೊಳಿಸಬೇಕು’ ಎಂದರು. ಕಾಮರ್ಸ್ನ ಜಿಲ್ಲಾ ಉಪಾಧ್ಯಕ್ಷ ರವಿ ಉತ್ತಪ್ಪ, ನಿರ್ದೇಶಕರಾದ ಕರ್ನಂಡ ರಘು ಸೋಮಯ್ಯ, ಪಟ್ರಪಂಡ ರಘು ನಾಣಯ್ಯ, ಬಿ.ಎಂ.ಸುರೇಶ್, ಮಂಜುನಾಥ್, ಸ್ಥಾನೀಯ ಉಪಾಧ್ಯಕ್ಷ ಶಾಹುಲ್ ಹಮೀದ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-51-1109976486

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.