ವಿರಾಜಪೇಟೆ: ಮಹಿಳೆಯರು ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಳ್ಳುವ ಮೂಲಕ ಆಯಾ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ ಎಂದು ವಿರಾಜಪೇಟೆ ಕೊಡವ ಸಮಾಜದ ಕೊಡವ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ ತಾತಂಡ ಜ್ಯೋತಿ ಪ್ರಕಾಶ್ ಹೇಳಿದರು.

ವಿರಾಜಪೇಟೆ ಕೊಡವ ಸಮಾಜದಲ್ಲಿ ಈಚೆಗೆ ನಡೆದ ಕೊಡವ ಸಮಾಜದ ಕೊಡವ ಪೊಮ್ಮಕ್ಕಡ ಒಕ್ಕೂಟದ 2025-26 ನೇ ಸಾಲಿನ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಿಳೆ ಕೇವಲ ಮನೆಯ ನಿರ್ವಹಣೆ ಮಾಡುವಲ್ಲಿ ಮಾತ್ರ ಸೀಮಿತವಾಗದೆ ಸಮಾಜದಲ್ಲಿಯೂ ಸೇವೆ ಸಲ್ಲಿಸುತ್ತಾಳೆ. ಯಾವುದೇ ಕೆಲಸವನ್ನು ನಾವು ಮಾಡುವ ಸಂದರ್ಭದಲ್ಲಿ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಮಾಡಬೇಕು. ಮನಸ್ಸಿಟ್ಟು ಮಾಡುವ ಕೆಲಸವು ಸಮಾಜಕ್ಕೆ ಕೊಡುಗೆ ನೀಡುವಂತಿರಬೇಕು. ಒಕ್ಕೂಟದ ಸದಸ್ಯರು ಸಮಾಜಮುಖಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು.

ಕೆ.ಚಿತ್ರ ಚರ್ಮಣ ಅವರು ವರದಿ ವಾಚಿಸಿದರು. ತಾತಂಡ ಏಸು ಕಬೀರ್ ಅವರು ಲೆಕ್ಕ ಪತ್ರ ಮಂಡಿಸಿದರು. ನಂತರ ಒಕ್ಕೂಟದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆಯೋಜಿಸಲಾಗುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಉಮ್ಮತ್ತಾಟ್ ಪ್ರದರ್ಶನ, ಆಟೋಟ ಸ್ಪರ್ಧೆ, ಹಬ್ಬಗಳನ್ನು ಆಚರಿಸುವುದು ಹಾಗೂ ವಿರಾಜಪೇಟೆ ಕೊಡವ ಸಮಾಜವು ಒಕ್ಕೂಟಕ್ಕೆ ನೀಡುತ್ತಿರುವ ಸಹಕಾರವನ್ನು ಈ ಸಂದರ್ಭ ಶ್ಲಾಘಿಸಲಾಯಿತು.

ಒಕ್ಕೂಟದ ಪದಾಧಿಕಾರಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಒಕ್ಕೂಟದ ಬೈಲ, ವಂತಿಕೆಯ ಬಗ್ಗೆ ಹಾಗೂ ಸಮಾಜ ಸೇವೆಯಲ್ಲಿ ಒಕ್ಕೂಟದ ಪಾಲ್ಗೊಳ್ಳುವಿಕೆಯ ಕುರಿತು ಚರ್ಚೆ ಮಾಡಲಾಯಿತು.

ಮೃತರಾದ ಒಕ್ಕೂಟದ ಸದಸ್ಯರಾದ ಬೊವ್ವೇರಿಯಂಡ ಆಶಾ ಸುಬ್ಬಯ್ಯ ಹಾಗೂ ನಾಯಕಂಡ ಬೇಬಿ ಚಿಣ್ಣಪ್ಪ ಅವರಿಗೆ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮೂಕೊಂಡ ಪ್ರೀತ್ ಈರಪ್ಪ, ಚೇದಂಡ ರೋಸಿ ಸುರೇಶ್, ಮಾತಂಡ ಸುಷ್ಮಾ ಅರುಣ್, ಮುರುವಂಡ ಉಷಾ ಮೊಣ್ಣಪ್ಪ ಸೇರಿ ವಿರಾಜಪೇಟೆ ಕೊಡವ ಸಮಾಜದ ಕೊಡವ ಪೊಮ್ಮಕ್ಕಡ ಒಕ್ಕೂಟದ ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-1336564586

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.