ವಿರಾಜಪೇಟೆ: ಜಿಲ್ಲೆಯಲ್ಲಿ ಸಾಕಷ್ಟು ವಾಲಿಬಾಲ್ ಕ್ರೀಡಾಪಟುಗಳಿದ್ದು, ಅವರ ಕೊಡುಗೆ ಅಪಾರವಾಗಿದೆ. ವಾಲಿಬಾಲ್ ಕ್ರೀಡೆಯನ್ನು ಮತ್ತಷ್ಟು ಉತ್ತೇಜಿಸಲು ಸೂಕ್ತ ಕಾರ್ಯಯೋಜನೆ ರೂಪಿಸುವಂತೆ ಶಾಸಕ ಎ.ಎಸ್. ಪೊನ್ನಣ್ಣ ಸಲಹೆ ನೀಡಿದರು.

ಕೊಡಗು ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ಪಟ್ಟಣದ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.

ಕೊಡಗಿನಲ್ಲಿ ಹಿಂದಿನಿಂದಲೂ ವಾಲಿಬಾಲ್ ಕ್ರೀಡೆ ಜನಪ್ರಿಯವಾಗಿದ್ದು, ಸಣ್ಣಪುಟ್ಟ ಗ್ರಾಮ ಸೇರಿದಂತೆ ಜಿಲ್ಲೆಯ ಮೂಲೆಮೂಲೆಗಳಲ್ಲಿ ನಿರಂತರವಾಗಿ ಟೂರ್ನಿ ಆಯೋಜಿಸಲಾಗುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೆ ತಮ್ಮಲ್ಲಿರುವ ಕ್ರೀಡಾ ಕೌಶಲ ಪ್ರದರ್ಶಿಸಲು ಹೆಚ್ಚು ಅನುಕೂಲವಾಗಿದೆ’ ಎಂದರು.

‘ನನ್ನ ಅವಧಿಯಲ್ಲಿ ಕ್ರೀಡೆಗೆ ಸಾಧ್ಯವಾದಷ್ಟು ಹೆಚ್ಚಿನ ಮಟ್ಟದಲ್ಲಿ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ವಾಲಿಬಾಲ್ ಕ್ರೀಡೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಬೇಕಾಗುವ ಎಲ್ಲಾ ಸಹಕಾರ ನೀಡಲು ಸಿದ್ಧ. ಈ ಕುರಿತು ವೈಜ್ಞಾನಿಕವಾಗಿ ಸಮಾಲೋಚಿಸಿ ವಾಲಿಬಾಲ್ ಕ್ರೀಡೆಯ ಉತ್ತೇಜನಕ್ಕೆ ಅಗತ್ಯವಿರುವ ಕಾರ್ಯಯೋಜನೆಗಳನ್ನು ರೂಪಿಸಿ ಅಗತ್ಯ ಪ್ರಸ್ತಾವ ಸಲ್ಲಿಸಬೇಕು’ ಎಂದು ವಾಲಿಬಾಲ್ ಅಸೋಸಿಯೇಷನ್ ಪದಾಧಿಕಾರಿಗಳಿಗೆ ಸೂಚಿಸಿದರು.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ. ಹಂಸ ಸಭೆಯಲ್ಲಿ ಮಾತನಾಡಿದರು. ಶಾಸಕ ಪೊನ್ನಣ್ಣ ಅವರನ್ನು ಕೊಡಗು ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವಾಲಿಬಾಲ್ ಪಟು ಬಲ್ಲಚಂಡ ಗೌತಮ್ ಅಧ್ಯಕ್ಷತೆ ವಹಿಸಿದ್ದರು.

ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಾಲಿಬಾಲ್ ಹಿರಿಯ ಆಟಗಾರ ಕರೀಂ ಕಡಂಗ, ವಿರಾಜಪೇಟೆ ಪುರಸಭೆ ಮಾಜಿ ಅಧ್ಯಕ್ಷೆ ಮನೆಯಪಂಡ ದೇಚಮ್ಮ, ಮಾಜಿ ಸದಸ್ಯರಾದ ಮತೀನ್, ರಾಫಿ, ಆತಿಫ್ ಮನ್ನಾ, ಕಾಂಗ್ರೆಸ್ ಪಕ್ಷದ ಮಂಜು, ಮೀತಲ್ತಂಡ ಇಸ್ಮಾಯಿಲ್, ಅಮ್ಮಂಡ ಸುಮನ್, ಮುಂಡಚಾಡಿರ ರಜಿತ್, ಕತ್ತಣಿರ ಅಬ್ದುಲ್ ರಹಿಮಾನ್, ಕತ್ತಣಿರ ಅಂದಾಯಿ ಅವರು ಉಪಸ್ಥಿತರಿದ್ದರು.

ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ ನೂರಾರು ವಾಲಿಬಾಲ್ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.