ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚನೆ

Published 28 ಮೇ 2024, 5:29 IST
Last Updated 28 ಮೇ 2024, 5:29 IST
ಅಕ್ಷರ ಗಾತ್ರ

ಮಡಿಕೇರಿ: ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಹಾಗೂ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಯನೂರು ಮಂಜುನಾಥ್ ಪರವಾಗಿ ನಗರದಲ್ಲಿ ಕಾಂಗ್ರೆಸ್ ಮುಖಂಡರು ಸೋಮವಾರ ಮತಯಾಚನೆ ನಡೆಸಿದರು.

ಇಲ್ಲಿನ ಸಂತ ಮೈಕಲರ ಶಾಲಾ ಸಭಾಂಗಣದಲ್ಲಿ ನಡೆಯುತ್ತಿದ್ದ ಕೊಡಗು ಜಿಲ್ಲಾ ಮುಖ್ಯೋಪಾಧ್ಯಾಯರ ಸಭೆಗೆ ಬಂದ ಮುಖಂಡ ಚುಮ್ಮಿ ದೇವಯ್ಯ ಮತ್ತು ಇತರರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಿದರು.

ಈ ವೇಳೆ ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ‘ಶಿಕ್ಷಕರ ಕ್ಷೇತ್ರದಿಂದ ಸ್ವತಃ ಶಿಕ್ಷಕರಾದ ಕೆ.ಕೆ.ಮಂಜುನಾಥ್ ಅವರು ಅಭ್ಯರ್ಥಿ ಆಗಿರುವುದರಿಂದ ಮತದಾರರು ಹೆಚ್ಚಿನ ಒಲವು ತೋರುತ್ತಿದ್ದು ಶಿಕ್ಷಕರ ಸಮಸ್ಯೆ ನಿವಾರಣೆಗೆ ಕೆ.ಕೆ.ಮಂಜುನಾಥ್ ಆಯ್ಕೆ ಅನಿವಾರ್ಯ ಎಂಬ ತೀರ್ಮಾನಕ್ಕೆ ಬಂದಿದ್ದಾರೆ’ ಎಂದರು.

ರಾಜ್ಯ ಮಟ್ಟದ ಮುಖಂಡರಾದ ಅಯನೂರು ಮಂಜುನಾಥ್ ಅವರು ಉತ್ತಮ ಆಡಳಿತಗಾರರು ಎಂದು ಖ್ಯಾತರಾಗಿರುವುದರಿಂದ ಕಾಂಗ್ರೆಸ್‌ನ ಇಬ್ಬರು ಅಭ್ಯರ್ಥಿಗಳಿಗೆ ಜಿಲ್ಲೆಯಲ್ಲಿ ಹೆಚ್ಚಿನ ಮತ ಲಭ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ನಗರಸಭಾ ಸದಸ್ಯ ಪ್ರಕಾಶ್ ಆಚಾರ್ಯ, ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಮುಖಂಡರಾದ ಮಂಡಿರ ಸದಾ ಮುದ್ದಪ್ಪ, ಜಿ.ಸಿ.ಜಗದೀಶ್, ಯಾಕುಬ್, ಪುದಿನೆರವನ ರೇವತಿ ರಮೇಶ್, ಬಿ.ಪಿ.ಗಣೇಶ್, ಶಶಿ, ಮಮ್ತಾಜ್, ರವಿಗೌಡ, ಲೀಲಾ ಶೇಷಮ್ಮ, ಕವನ್ ಕೊತ್ತೋಳಿ, ಶರಣ್, ಅರ್ಜುನ್, ರಿಯಾಜ್ ಅಹಮದ್, ಶೇಕ್ ಅಹಮದ್, ಸುಬ್ರಮಣಿ ,ಅಬೀಬ್, ಫ್ರಾನ್ಸಿ ಪಾರ್ವತಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT