ಗುರುವಾರ , ಆಗಸ್ಟ್ 11, 2022
20 °C

ಮೈದಾನಕ್ಕಾಗಿ ಮತದಾನ ಬಹಿಷ್ಕಾರ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿದ್ದಾಪುರ (ಕೊಡಗು ಜಿಲ್ಲೆ): ಸಿದ್ದಾಪುರ ವ್ಯಾಪ್ತಿಯಲ್ಲಿ ಸಾರ್ವಜನಿಕ ಮೈದಾನ ಒದಗಿಸದಿದ್ದರೆ ಮತದಾನ ಬಹಿಷ್ಕರಿಸಲಾಗುವುದು ಎಂಬ ಯುವಕರ ಪೋಸ್ಟ್‌ ಸಾಮಾಜಿಕ‌ ಜಾಲತಾಣದಲ್ಲಿ ಹರಿದಾಡುತ್ತಿದೆ.

ಜಿಲ್ಲೆಯ ಅತಿ ಹೆಚ್ಚು ಗ್ರಾ.ಪಂ ಸದಸ್ಯರನ್ನು ಹೊಂದಿರುವ ಪಂಚಾಯಿತಿ ಎಂಬ ಹೆಗ್ಗಳಿಗೆ ಹೊಂದಿರುವ ಸಿದ್ದಾಪುರದಲ್ಲಿ ಯಾವುದೇ ಸಾರ್ವಜನಿಕ ಮೈದಾನ ಇಲ್ಲ. ಗ್ರಾಮ ವ್ಯಾಪ್ತಿಯಲ್ಲಿ ಸಾರ್ವಜನಿಕ ಮೈದಾನ ಇಲ್ಲದ ಕಾರಣ ಯಾವುದೇ ಪಂದ್ಯಾವಳಿಗಳು ನಡೆಯುತ್ತಿಲ್ಲ. ಗ್ರಾಮಕ್ಕೆ ಒಂದು ಸಾರ್ವಜನಿಕ ಮೈದಾನ ಒದಗಿಸಬೇಕೆಂದು ವಿವಿಧ ಯುವಕ ಸಂಘಗಳು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರು. ಸಿಟಿ ಬಾಯ್ಸ್ ಯುವಕ ಸಂಘದ ವತಿಯಿಂದ ಜಿಲ್ಲಾಧಿಕಾರಿಗೆ ಮೈದಾನ ಕಲ್ಪಿಸುವಂತೆ ಮನವಿ ಸಲ್ಲಿಸಲಾಗಿತ್ತು. ಈವರೆಗೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಸಿಟಿ ಬಾಯ್ಸ್ ಯುವಕ ಸಂಘದ ಪದಾಧಿಕಾರಿಗಳು ಆರೋಪಿಸಿದ್ದಾರೆ.

ಸಾರ್ವಜನಿಕ ಮೈದಾನಕ್ಕಾಗಿ ಯುವಕರ ಗುಂಪು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದು, ಯುವಕರಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು