ಕುಶಾಲನಗರ: ಬೆಳಗಾವಿ ತಾಂತ್ರಿಕ ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ ಹಾಗೂ ಜಲ ಸಂಪನ್ಮೂಲ ಇಲಾಖೆಯ ಸಹಯೋಗದೊಂದಿಗೆ ಇಲ್ಲಿನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ಜಲ ಸಂರಕ್ಷಣಾ ಅಭಿಯಾನ ನಡೆಯಿತು.

ಜಲ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿದ್ದ ಕಾಲೇಜಿನ ನೂರಾರು ವಿದ್ಯಾರ್ಥಿಗಳು ತಮ್ಮನ್ನು ಜಲ ಸಂರಕ್ಷಣೆಗೆ ತೊಡಗಿಸಿಕೊಳ್ಳುವ ಕುರಿತಂತೆ ಸರ್ಕಾರದಿಂದ ಕೈಗೊಂಡಿದ್ದ ಜಲ ಸಂರಕ್ಷಣೆಯ ಗಿನ್ನಿಸ್ ರೆಕಾರ್ಡ್ನ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿ ತಾವುಗಳು ಜಲ ಸಂರಕ್ಷಕರಾಗುವುದಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಇದೇ ವೇಳೆ ಕಾಲೇಜಿನ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಎಲ್ಲರೂ ಜತೆಗೂಡಿ, ತಾವೆಲ್ಲರೂ ನಾಳಿನ ಉತ್ತಮ ಭವಿಷ್ಯಕ್ಕಾಗಿ ಜಲ ಸಂರಕ್ಷಣೆ ಅಭಿಯಾನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದಾಗಿ ಒಕ್ಕೊರಲಿನಿಂದ ಪ್ರಮಾಣೀಕರಿಸಿದರು.

ಕಾಲೇಜಿನ ಪ್ರಾಂಶುಪಾಲ ಕೆ.ಐ.ಪರಶಿವಮೂರ್ತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ‘ನೀರು ನಮ್ಮ ಪರಿಸರ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದೆ. ನೀರು ಎಂದರೆ ಜೀವನ. ಜಲಮೂಲಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ನಾವುಗಳು ಭವಿಷ್ಯತ್ತಿನ ದೃಷ್ಟಿಯಿಂದ ಪ್ರಕೃತಿಯ ಅಮೂಲ್ಯ ಸಂಪತ್ತಾದ ನೀರಿನ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಬೇಕು’ ಎಂದು ಮನವಿ ಮಾಡಿದರು.

ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥ ಎನ್.ಎಸ್.ಸತೀಶ್, ‘ಜಲ ಸಂರಕ್ಷಣೆಯ ಹಿನ್ನೆಲೆಯಲ್ಲಿ ಸರ್ಕಾರದ ಜಲ ಜಾಗೃತಿ ಅಭಿಯಾನದಂತೆ ಕಾಲೇಜಿನಲ್ಲಿ ಜಲ ಸಂರಕ್ಷಣೆಯ ಬೃಹತ್ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಜಲ ಸಂರಕ್ಷಣೆ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.

ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಜಲ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಯಾಂತ್ರಿಕ ವಿಭಾಗದ ಮುಖ್ಯಸ್ಥ ಸೀನಪ್ಪ ಮಾತನಾಡಿ, ‘ಎಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮನ್ನು ಜಲ ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜಲ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದರು.

ಈ ಸಂದರ್ಭ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ ರಂಗನಾಥ್, ಡಾ ಹೇಮಲತಾ, ಉಪನ್ಯಾಸಕರಾದ ಸಹನಾ, ಪಿ.ಸಂಜೀವ, ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಸೇರಿದಂತೆ ವಿವಿಧ ವಿಭಾಗಗಳ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳು ಜಲ ಸಂರಕ್ಷಣೆ- ನಮ್ಮೆಲ್ಲರ ಹೊಣೆ, ಜಲವೇ ಜೀವ ಜಲ, ನೀರನ್ನು ಮಿತವಾಗಿ ಬಳಸಿ- ಭವಿಷ್ಯಕ್ಕಾಗಿ ಉಳಿಸಿ, ಅಂತರ್ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಜಲಮೂಲಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬಿತ್ಯಾದಿ ಪರಿಸರ ಘೋಷಣೆಗಳನ್ನು ಪ್ರಚುರಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.