ಕುಶಾಲನಗರ: ಕಾವೇರಿ ಹಾಗೂ ಹಾರಂಗಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನಲ್ಲಿ ಏರಿಕೆ ಕಂಡು ಹಿನ್ನೆಲೆಯಲ್ಲಿ ಸೋಮವಾರ 10 ಸಾವಿರ ಕ್ಯುಸೆಕ್ಸ್ ನೀರು ನದಿಗೆ ಬಿಡುಗಡೆ ಮಾಡಲಾಯಿತು.

2859 ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ 2851.87 ಅಡಿ ನೀರು ಇದ್ದು, 6.33 ಟಿಎಂಸಿ ನೀರು ಸಂಗ್ರಹಗೊಂಡಿದೆ. ಜಲಾಶಯಕ್ಕೆ 7528 ಸಾವಿರ ಕ್ಯುಸೆಕ್ಸ್ ನೀರು ಒಳಹರಿವು ಇದ್ದು, ನದಿಗೆ 10 ಸಾವಿರ ಕ್ಯುಸೆಕ್ಸ್ ಹರಿಸಲಾಗುತ್ತಿದೆ.

ಕಳೆದ ಮೂರು ದಿನಗಳಿಂದ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ನದಿತೊರೆ ತೋಡುಗಳು ಉಕ್ಕಿ ಹರಿಯುತ್ತಿವೆ. ನಾಡಿನ ಜೀವ ನದಿ ಕಾವೇರಿ ಹಾರಂಗಿ ನದಿಗಳಲ್ಲೂ ಕೂಡ ನೀರಿ ಪ್ರಮಾಣ ಏರಿಕೆ ಕಂಡು ಬಂದಿದೆ.

ಕಣಿವೆ ರಾಮಲಿಂಗೇಶ್ವರ ದೇವಾಲಯ ಬಳಿ ಹಾರಂಗಿ ಹಾಗೂ ಕಾವೇರಿ ನದಿಗಳು ಸಂಗಮಗೊಂಡು ಹರಿಯುತ್ತಿದ್ದು, ನದಿಯ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ. ನದಿಗೆ ಅಡ್ಡವಾಗಿ ತೂಗು ಸೇತುವೆ ನಿರ್ಮಾಣ ಮಾಡಲಾಗಿದ್ದು, ಸೇತುವೆ ಬಳಿ ಜನರು ನೀರಿನ ಹರಿವಿನ ದೃಶ್ಯ ವೀಕ್ಷಣೆ ಮಾಡುತ್ತಿರುವುದು ಕಂಡು ಬಂದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಳ್ಳ, ಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ.

‘ಕೆರೆಗಳಲ್ಲಿಯೂ ಕೂಡ ನೀರಿನ ಮಟ್ಟದಲ್ಲಿ ಹೆಚ್ಚಳ ಕಂಡುಬಂದಿದ್ದು, ಗದ್ದೆಗಳು ನೀರಿನಿಂದ ಜಲಾವೃತ್ತಗೊಂಡಿವೆ.ಕಾವೇರಿ ನದಿಯಲ್ಲಿ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬರುತ್ತಿದ್ದು, ನದಿ ಪಾತ್ರದ ಜನತೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಮೀನುಗಾರರು ಎಚ್ಚರಿಕೆಯಿಂದ ಇರುವಂತೆ’ ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ಸೂಚಿಸಿದ್ದಾರೆ.

ತಹಶೀಲ್ದಾರ್ ಕಿರಣ್ ಗೌರಯ್ಯ ಭೇಟಿ

ಹಾರಂಗಿ ಜಲಾಶಯದಿಂದ ಹೆಚ್ಚಿನ ನೀರನ್ನು ನದಿಗೆ ಹರಿಬಿಡಲಾಗಿದೆ. ಕೆಳ ಸೇತುವೆ ಬಹುತೇಕ ನೀರಿನಿಂದ ಆವೃತ್ತಗೊಂಡಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಸೇತುವೆ ಮೇಲೆ ಹೋಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಸೋಮವಾರ ತಹಶೀಲ್ದಾರ್ ಕಿರಣ್ ಗೌರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾರಂಗಿ ಜಲಾಶಯ ಮುಂಬಾಗದ ಕಿರು ಸೇತುವೆ ಮೇಲೆ ಭಾನುವಾರ ಪ್ರವಾಸಿಗರ ದಂಡು - ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದಿದ್ದರು. ಪ್ರವಾಸಿಗರು ಸೆಲ್ಫಿ ಫೋಟೊ ತೆಗೆದುಕೊಳ್ಳಲು ಸೇತುವೆ ಮೇಲ್ಭಾಗವೇ ವಾಹನ ನಿಲ್ಲಿಸಿಕೊಂಡ ಪರಿಣಾಮ ಎರಡೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ತಡೆಗೋಡೆ ಇಲ್ಲದೆ ಪ್ರವಾಸಿಗರು ಸೇತುವೆಯ ಎರಡು ಬದಿಗಳಲ್ಲಿ ನಿಂತು ಫೋಟೊ ತೆಗೆದುಕೊಳ್ಳುತ್ತಿರುವ ಅಪಾಯಕಾರಿಯಾದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಕಂದಾಯ ನಿರೀಕ್ಷಕ ಸಂತೋಷ್ ಹಾಗೂ ಸಿಬ್ಬಂದಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.