ಭಾನುವಾರ, ಅಕ್ಟೋಬರ್ 25, 2020
21 °C
ವಿರಾಜಪೇಟೆ ತಾಲ್ಲೂಕಿನಲ್ಲಿ ಶುಕ್ರವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆ

ಗದ್ದೆಗೆ ನುಗ್ಗಿದ ನೀರು: ಆತಂಕದಲ್ಲಿ ರೈತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿರಾಜಪೇಟೆ: ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 24 ಗಂಟೆಗಳಿಂದ ಧಾರಾಕಾರ ಮಳೆ ಆಯಿತು.

ಕೆಲವು ದಿನಗಳಿಂದ ಕೊಂಚ ಇಳಿಮುಖಗೊಂಡಿದ್ದ ವರ್ಷಧಾರೆಯು ಶುಕ್ರವಾರ ರಾತ್ರಿಯಿಂದ ಮತ್ತೆ ಧಾರಾಕಾರವಾಗಿ ಸುರಿಯುತ್ತಿದೆ.

ವಿರಾಜಪೇಟೆ ವಿಭಾಗದಲ್ಲಿ ಶನಿವಾರ ದಿನವಿಡೀ ಬಿಡುವು ನೀಡದೆ ಮಳೆ ಸುರಿಯಿತು. ಸಮೀಪದ ಬೇಟೋಳಿ, ಆರ್ಜಿ, ರಾಮನಗರ, ಹೆಗ್ಗಳ, ಮಾಕುಟ್ಟ, ಬಿಟ್ಟಂಗಾಲ, ಕದನೂರು, ಕಾಕೋಟು ಪರಂಬು, ಚೆಂಬೆಬೆಳ್ಳೂರು, ಕದನೂರು ಸೇರಿದಂತೆ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಉತ್ತಮ ಮಳೆ ಆಗಿದೆ.

ಶನಿವಾರ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿರುವುದರಿಂದ ಹಳ್ಳಕೊಳ್ಳಗಳು ಮತ್ತೆ ತುಂಬಿ ಹರಿಯಲು ಆರಂಭಿಸಿವೆ.

ಸಮೀಪದ ಭೇತ್ರಿಯಲ್ಲಿನ ಕಾವೇರಿ ಹೊಳೆ ಹಾಗೂ ಕದನೂರು ಹೊಳೆಯ ನೀರಿನ ಮಟ್ಟದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ನಿರಂತರ ಮಳೆಯಿಂದ ಭತ್ತದ ಗದ್ದೆಗಳಿಗೆ ಹಲವೆಡೆ ನೀರು ನುಗ್ಗಿದ್ದು, ಬೆಳೆ ಕೊಳೆಯುವ ಆತಂಕ ರೈತರನ್ನು ಕಾಡಲಾರಂಭಿಸಿದೆ.

ಈಗಾಗಲೇ ಎಲ್ಲೆಡೆ ಭತ್ತದ ನಾಟಿ ಕಾರ್ಯ ಪೂರ್ಣಗೊಂಡಿದ್ದು, ಮೂರು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರಿದರೆ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡು ರೈತರು ಸಂಕಷ್ಟಕ್ಕೀಡಾಗುವ ಸಾಧ್ಯತೆ ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು